ಮಳೆಯಿಂದಾಗಿ ಭೂಕುಸಿತದ ಭೀತಿ: ಆಗುಂಬೆ ಘಾಟಿಯಲ್ಲಿ ಘನ ವಾಹನಗಳ ಸಂಚಾರ ಬಂದ್!

Edited By:

Updated on: Jul 04, 2026 | 5:02 PM

ಮುಖ್ಯಾಂಶಗಳು

  • ಮಳೆಗಾಲದ ಮುಂಜಾಗ್ರತೆ ಹಿನ್ನಲೆ ಘನ ವಾಹನಗಳಿಗೆ ಆಗುಂಬೆ ಘಾಟಿಯಲ್ಲಿ ನಿಷೇಧ
  • ಕೆಲವು ಕಡೆಗಳಲ್ಲಿ ಭೂಕುಸಿತದ ಭೀತಿ
  • ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿಕೆ ಖಡಕ್​ ಆದೇಶ

ಉಡುಪಿ ಮತ್ತು ಶಿವಮೊಗ್ಗವನ್ನು ಸಂಪರ್ಕಿಸುವ ಆಗುಂಬೆ ಘಾಟ್‌ನಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತದ ಆತಂಕ ಹೆಚ್ಚಾಗಿದೆ. ಜಿಲ್ಲಾಡಳಿತವು ಮುಂಜಾಗ್ರತಾ ಕ್ರಮವಾಗಿ, ಘನ ವಾಹನಗಳ ಸಂಚಾರವನ್ನು ನಿಷೇಧಿಸಿದೆ. ಸೆಪ್ಟೆಂಬರ್ 30ರವರೆಗೆ ಲಘು ವಾಹನಗಳಿಗೆ ಮಾತ್ರ ಅವಕಾಶವಿದ್ದು, ಮಳೆಗಾಲದಲ್ಲಿ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಉಡುಪಿ, ಜುಲೈ 04: ಉಡುಪಿ ಮತ್ತು ಶಿವಮೊಗ್ಗವನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾದ ಆಗುಂಬೆ ಘಾಟಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತದ ಆತಂಕ ಹೆಚ್ಚಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಘನ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿಕೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 169ಎ, ಅಂದರೆ ತೀರ್ಥಹಳ್ಳಿ – ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಮಣ್ಣು ತೇವಗೊಂಡು ಭೂಕುಸಿತ ಸಂಭವಿಸುವ ಸಾಧ್ಯತೆ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದೆ. ಸೆಪ್ಟೆಂಬರ್ 30ರವರೆಗೆ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಚೆಕ್‌ಪೋಸ್ಟ್‌ಗಳಲ್ಲಿ ಸಿಬ್ಬಂದಿಗಳು ವಾಹನಗಳನ್ನು ಪರಿಶೀಲಿಸಿ, ನಿಗದಿತ ಮಾನದಂಡಗಳನ್ನು ಪೂರೈಸಿದ ವಾಹನಗಳಿಗೆ ಮಾತ್ರ ಮುಂದೆ ಸಾಗಲು ಅನುಮತಿ ನೀಡುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us