ಅಹಿಂದ ಯಾರ ಆಸ್ತಿಯೂ ಅಲ್ಲ ಎಂದ ಸಚಿವ ಸತೀಶ್ ಜಾರಕಿಹೊಳಿ
ಹಿಂದುಳಿದ ವರ್ಗಗಳ ಸಮಾವೇಶಕ್ಕೆ ತಮಗೆ ಆಹ್ವಾನವಿಲ್ಲದ ಕಾರಣ ಸಚಿವ ಸತೀಶ್ ಜಾರಕಿಹೊಳಿ ಗೈರಾಗಿದ್ದಾರೆ. ಈ ಕುರಿತಾಗಿ ಮಾತನಾಡಿರುವ ಅವರು, ಹಿಂದುಳಿದ ವರ್ಗಗಳ ಸಮಾವೇಶಕ್ಕೆ ನನ್ನನ್ನು ಯಾರೂ ಕರೆದಿಲ್ಲ. ಕರೆಯದೇ ಹೇಗೆ ಹೋಗಲಿ ಎಂದು ಪ್ರಶ್ನಿಸಿದ್ದಾರೆ. ಇನ್ನು ಅಹಿಂದ ಯಾರ ಆಸ್ತಿಯೂ ಅಲ್ಲ ಎಂದು ಹೇಳಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 06: ‘ಹಿಂದುಳಿದ ವರ್ಗಗಳ ಸಮಾವೇಶಕ್ಕೆ ನನ್ನನ್ನು ಯಾರೂ ಕರೆದಿಲ್ಲ. ಆಯೋಜಕರು ನನ್ನನ್ನು ಕರೆದಿದ್ರೆ ಸಮಾವೇಶಕ್ಕೆ ನಾನು ಹೋಗುತ್ತಿದ್ದೆ, ಕರೆಯದೇ ಹೇಗೆ ಹೋಗಲಿ’ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಹಿಂದುಳಿದ ವರ್ಗಗಳ ಸಮಾವೇಶಕ್ಕೆ ಗೈರು ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಹಿಂದುಳಿದ ವರ್ಗಗಳ ಸಮಾವೇಶ ಗಂಭೀರವಾಗಿ ತಗೋಬೇಕಿಲ್ಲ. ಅಹಿಂದ ಯಾರ ಆಸ್ತಿಯೂ ಅಲ್ಲ. ಯಾರು ಬೇಕಾದರೂ ಅಹಿಂದ ಸಮಾವೇಶವನ್ನು ಮಾಡಬಹುದು. ನನ್ನನ್ನು ಯಾಕೆ ಕರೆದಿಲ್ಲ ಅಂತಾ ಆಯೋಜಕರನ್ನೇ ಕೇಳಿ’ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos

