ಅಹಿಂದ ಯಾರ ಆಸ್ತಿಯೂ ಅಲ್ಲ ಎಂದ ಸಚಿವ ಸತೀಶ್ ಜಾರಕಿಹೊಳಿ

Edited By:

Updated on: Sep 06, 2026 | 6:57 PM

ಹಿಂದುಳಿದ ವರ್ಗಗಳ ಸಮಾವೇಶಕ್ಕೆ ತಮಗೆ ಆಹ್ವಾನವಿಲ್ಲದ ಕಾರಣ ಸಚಿವ ಸತೀಶ್ ಜಾರಕಿಹೊಳಿ ಗೈರಾಗಿದ್ದಾರೆ. ಈ ಕುರಿತಾಗಿ ಮಾತನಾಡಿರುವ ಅವರು, ಹಿಂದುಳಿದ ವರ್ಗಗಳ ಸಮಾವೇಶಕ್ಕೆ ನನ್ನನ್ನು ಯಾರೂ ಕರೆದಿಲ್ಲ. ಕರೆಯದೇ ಹೇಗೆ ಹೋಗಲಿ ಎಂದು ಪ್ರಶ್ನಿಸಿದ್ದಾರೆ. ಇನ್ನು ಅಹಿಂದ ಯಾರ ಆಸ್ತಿಯೂ ಅಲ್ಲ ಎಂದು ಹೇಳಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್​ 06: ‘ಹಿಂದುಳಿದ ವರ್ಗಗಳ ಸಮಾವೇಶಕ್ಕೆ ನನ್ನನ್ನು ಯಾರೂ ಕರೆದಿಲ್ಲ. ಆಯೋಜಕರು ನನ್ನನ್ನು ಕರೆದಿದ್ರೆ‌ ಸಮಾವೇಶಕ್ಕೆ ನಾನು ಹೋಗುತ್ತಿದ್ದೆ, ಕರೆಯದೇ ಹೇಗೆ ಹೋಗಲಿ’ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಹಿಂದುಳಿದ ವರ್ಗಗಳ ಸಮಾವೇಶಕ್ಕೆ ಗೈರು ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಹಿಂದುಳಿದ ವರ್ಗಗಳ ಸಮಾವೇಶ ಗಂಭೀರವಾಗಿ ತಗೋಬೇಕಿಲ್ಲ. ಅಹಿಂದ ಯಾರ ಆಸ್ತಿಯೂ ಅಲ್ಲ. ಯಾರು ಬೇಕಾದರೂ ಅಹಿಂದ ಸಮಾವೇಶವನ್ನು ಮಾಡಬಹುದು. ನನ್ನನ್ನು ಯಾಕೆ ಕರೆದಿಲ್ಲ ಅಂತಾ ಆಯೋಜಕರನ್ನೇ ಕೇಳಿ’ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More