AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ಮುಗಿಯುತ್ತಿದ್ದಂತೆಯೇ ಭುಗಿಲೆದ್ದ ಯತೀಂದ್ರ ಸಿದ್ದರಾಮಯ್ಯ ಫೋಟೋ ವಿವಾದ: ಮೈಸೂರಿನಲ್ಲಿ ಪ್ರತಿಭಟನೆ

ದಸರಾ ಮುಗಿಯುತ್ತಿದ್ದಂತೆಯೇ ಭುಗಿಲೆದ್ದ ಯತೀಂದ್ರ ಸಿದ್ದರಾಮಯ್ಯ ಫೋಟೋ ವಿವಾದ: ಮೈಸೂರಿನಲ್ಲಿ ಪ್ರತಿಭಟನೆ

ರಾಮ್​, ಮೈಸೂರು
| Edited By: |

Updated on: Oct 22, 2026 | 2:51 PM

Share

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಪ್ರಕಟವಾದ ಸರ್ಕಾರದ ಅಧಿಕೃತ ಜಾಹೀರಾತಿನಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ಭಾವಚಿತ್ರವನ್ನು ಕೈಬಿಟ್ಟಿರುವುದು ಇದೀಗ ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತವಾಗಿದ್ದು, ಜಾಹೀರಾತು ಬಿಡುಗಡೆ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಗಳು ವ್ಯಕ್ತವಾಗಿವೆ.

ಮೈಸೂರು, (ಅಕ್ಟೋಬರ್ 22): ಈ ಬಾರಿ ಮೈಸೂರು ದಸರಾ ಅದ್ಧೂರಿಯಾಗಿ ತೆರೆ ಕಂಡಿದೆ. ಹಲವು ವಿಶೇಷತೆಗಳೊಂದಿಗೆ 11 ದಿನ ನವರಾತ್ರಿ ಉತ್ಸವ ಯಶಸ್ವಿಯಾಗಿದೆ. ಆದ್ರೆ, ದಸರಾ ಮುಗಿಯುತ್ತಿದ್ದಂತೆಯೇ ಕೆಲವ ವಿವಾದಗಳು ಸ್ಫೋಟಗೊಂಡಿವೆ. ನಿನ್ನೆ (ಅಕ್ಟೋಬರ್ 21) ನಂದಿ ಧ್ವಜ ಪೂಜೆಗೆಂದು ತೆರಳುತ್ತಿದ್ದ ಮೂವರು ಸವರಿಗೆ ಎಸ್ಪಿ ತಡೆದು ಅವಮಾನ ಮಾಡಲಾಗಿದೆ ಎನ್ನುವ ಮಾತುಗಳು ಕೇಳಿಬಂದಿದ್ದು, ಈ ಬಗ್ಗೆ ಪರ ವಿರೋಧದ ಚರ್ಚೆಗಳು ಶುರುವಾಗಿವೆ. ಇನ್ನೊಂದೆಡೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯನವರ ಫೋಟೋ ವಿವಾದ ಸೃಷ್ಟಿಸಿದೆ. ಹೌದು….ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಪ್ರಕಟವಾದ ಸರ್ಕಾರದ ಅಧಿಕೃತ ಜಾಹೀರಾತಿನಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ಭಾವಚಿತ್ರವನ್ನು ಕೈಬಿಟ್ಟಿರುವುದು ಇದೀಗ ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತವಾಗಿದ್ದು, ಜಾಹೀರಾತು ಬಿಡುಗಡೆ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಗಳು ವ್ಯಕ್ತವಾಗಿವೆ.

“ಸಿದ್ದರಾಮಯ್ಯರವರ ಸಿದ್ದಾಂತಗಳಿಗೆ ಈ ಗ್ರೂಪ್” ಎಂಬ ಫೇಸ್‌ಬುಕ್ ಪುಟದಲ್ಲಿ ಪತ್ರಿಕೆಗಳಲ್ಲಿ ಪ್ರಕಟವಾದ ದಸರಾ ಶುಭಾಶಯಗಳ ಜಾಹೀರಾತಿನ ತುಣುಕನ್ನು ಹಂಚಿಕೊಳ್ಳಲಾಗಿದ್ದು, ಅಧಿಕಾರಿಗಳ ನಡೆಯನ್ನು ಕಟುವಾಗಿ ಟೀಕಿಸಲಾಗಿದೆ. ಈ ಸಂಬಂಧ ಮೈಸೂರಿನಲ್ಲಿ ಅಹಿಂದ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಮೈಸೂರು ಜಿಲ್ಲಾಉಸ್ತುವಾರಿ ಸಚಿವರ ಫೋಟೋವನ್ನು ಹಾಕದೇ ನಿರ್ಲಕ್ಷ್ಯ ತೋರಿದ ವಾರ್ತ ಇಲಾಖೆ ಅಧಿಕಾರಿಗಳು ಸಿಎಂ ಡಿಸಿಎಂ ಫೋಟೋ ಮಾತ್ರ ಹಾಕಿದ್ದಾರೆ. ವಾರ್ತಇಲಾಖೆ ಅಧಿಕಾರಿಗಳು ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ಕ್ರಮಕೈಗೊಳ್ಳಬೇಕು. ಇದರ ಹಿಂದ ಇರುವ ಷಡ್ಯಂತ್ರವನ್ನು ಪತ್ತೆ ಹಚ್ಚಬೇಕು ಎಂದು ಆಗ್ರಹಿಸಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More