Ahmedabad Plane Crash: ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೆಳಗ್ಗೆ ಅಹಮದಾಬಾದ್ನ ಮೇಘಾನಿ ನಗರಕ್ಕೆ ಭೇಟಿ ನೀಡಿ ಏರ್ ಇಂಡಿಯಾ ವಿಮಾನ ಪತನವಾದ ಸ್ಥಳ ಪರಿಶೀಲನೆ ನಡೆಸಿದರು. ಇದೇ ವೇಳೆ, ಅಧಿಕಾರಿಗಳು ಅವರಿಗೆ ಸಮಗ್ರ ಮಾಹಿತಿ ನೀಡಿದರು. ಪ್ರಧಾನಿ ಮೋದಿ ಆಗಮನದ ಕಾರಣ ಅಪಘಾತದ ಸ್ಥಳವನ್ನು ಸಂಪೂರ್ಣವಾಗಿ ಮುಚ್ಚಲಾಗಿತ್ತು. ಅಪಘಾತದ ಸ್ಥಳಕ್ಕೆ ಹೋಗುವ ರಸ್ತೆಗಳನ್ನು ಸಹ ಮುಚ್ಚಲಾಗಿತ್ತು.
ಅಹಮದಾಬಾದ್, ಜೂನ್ 13: ಏರ್ ಇಂಡಿಯಾ ವಿಮಾನ ಪತನವಾದ ಅಹಮದಾಬಾದ್ನ ಮೇಘಾನಿ ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೆಳಗ್ಗೆ ಭೇಟಿ ನೀಡಿದರು. ಮೊದಲಿಗೆ ಅಹಮದಾಬಾದ್ ಸಿವಿಲ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಅವರು, ನಂತರ ದುರಂತದ ಸ್ಥಳಕ್ಕೆ ಭೇಟಿ ನೀಡಿದರು. ಅಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ವಿಡಿಯೋ ಇಲ್ಲಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Jun 13, 2025 10:35 AM