Modi in Ahmedabad: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ, ಗಾಯಾಳುಗಳ ಆರೋಗ್ಯ ವಿಚಾರಣೆ

Updated on: Jun 13, 2025 | 9:35 AM

ಅಹಮದಾಬಾದ್‌ ಏರ್ ಇಂಡಿಯಾ ವಿಮಾನ ದುರಂತ: ಪ್ರಧಾನಿ ಮೋದಿ ಅವರು ಅಹಮದಾಬಾದ್‌ನಲ್ಲಿದ್ದಾರೆ. ಅವರು ಘಟನಾ ಸ್ಥಳಕ್ಕೆ ತಲುಪಿ ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ. ಪ್ರಧಾನಿ ಮೋದಿ ಅಹಮದಾಬಾದ್ ಸಿವಿಲ್ ಆಸ್ಪತ್ರೆಗೆ ಆಗಮಿಸಿದ್ದು, ಗಾಯಾಳುಗಳನ್ನು ಸಹ ಭೇಟಿ ಮಾಡಿದ್ದಾರೆ. ದುರಂತದ ಬೆನ್ನಲ್ಲೇ ಗುರುವಾರ ಮೊದಲು ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದರು. ಇದೀಗ ಮೋದಿ ಆಗಮಿಸಿದ್ದಾರೆ. ವಿಡಿಯೋ ಇಲ್ಲಿದೆ.

ಅಹಮದಾಬಾದ್, ಜೂನ್ 13: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೆಳಗ್ಗೆ ಅಹಮದಾಬಾದ್ ಸಿವಿಲ್ ಆಸ್ಪತ್ರೆಗೆ ಆಗಮಿಸಿ, ಅಹಮದಾಬಾದ್ ವಿಮಾನ ಪತನ ದುರಂತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು. ಗುರುವಾರ ಮಧ್ಯಾಹ್ನ ಸಂಭವಿಸಿದ್ದ ಭೀಕರ ವಿಮಾನ ಅಪಘಾತದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 265 ಜನ ಮೃತಪಟ್ಟಿದ್ದಾರೆ. ಮೆಡಿಕಲ್ ಕಾಲೇಜು ಹಾಸ್ಟೆಲ್​ ಮೇಲೆಯೇ ವಿಮಾನ ಪತನವಾಗಿದ್ದರಿಂದ ಅಲ್ಲಿದ್ದವರೂ ಅನೇಕರು ಮೃತಪಟ್ಟಿದ್ದಾರೆ. ಸಾವಿನ ಬಗ್ಗೆ ಅಧಿಕೃತ ಘೋಷಣೆ ಡಿಎನ್​ಎ ಪರೀಕ್ಷೆಯ ನಂತರ ಪ್ರಕಟವಾಗಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More