ಅಹಮದಾಬಾದ್ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. 232 ಪ್ರಯಾಣಿಕರು ಮತ್ತು 10 ಸಿಬ್ಬಂದಿಯನ್ನು ಹೊತ್ತ ಏರ್ ಇಂಡಿಯಾ ವಿಮಾನ ಮಧ್ಯಾಹ್ನ 1.17 ಕ್ಕೆ ಲಂಡನ್‌ಗೆ ಹೊರಟಾಗ ಈ ಘಟನೆ ಸಂಭವಿಸಿದೆ. ಈ ವಿಮಾನದಲ್ಲಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, 7 ಪೋರ್ಚುಗೀಸ್ ಮತ್ತು ಒಬ್ಬ ಕೆನಡಾದ ಪ್ರಯಾಣಿಕ ಇದ್ದರು. ಅಹಮದಾಬಾದ್‌ನ ಮೇಘನಿನಗರ ಪ್ರದೇಶದ ಬಳಿಯ ಧಾರ್ಪುರದಿಂದ ಭಾರೀ ಹೊಗೆ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ತುರ್ತು ಪ್ರತಿಕ್ರಿಯೆ ತಂಡಗಳನ್ನು ನಿಯೋಜಿಸಲಾಗಿದೆ. ಅಪಘಾತದ ಕಾರಣವನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ.
ಅಹಮದಾಬಾದ್, ಜೂನ್ 12: ಗುಜರಾತ್ನ ಅಹಮದಾಬಾದ್ನಲ್ಲಿ (Ahmedabad Plane Crash) ಇಂದು ಮಧ್ಯಾಹ್ನ ಸಂಭವಿಸಿದ ವಿಮಾನ ಅಪಘಾತದಲ್ಲಿ 241 ಜನರು ಮೃತಪಪಟ್ಟಿದ್ದಾರೆ. ಕೇವಲ ಓರ್ವ ವ್ಯಕ್ತಿ ಬಚಾವಾಗಿದ್ದಾರೆ. ಈ ದುರಂತ ನಡೆದ ಸ್ಥಳಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಭೇಟಿ ನೀಡಿ ಪರಿಶೀಲನೆ ನಡೆಸಿ, ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದಾರೆ.
ಈ ಘಟನೆಯ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಜರಾತ್ ಸಿಎಂ, ರಾಜ್ಯದ ಗೃಹ ಸಚಿವರು ಮತ್ತು ಡಿಜಿಪಿ ಅವರೊಂದಿಗೆ ಮಾತನಾಡಿದ್ದರು. ತಕ್ಷಣ ದೆಹಲಿಯಿಂದ ಅಹಮದಾಬಾದ್ಗೆ ಹೊರಟಿದ್ದ ಅಮಿತ್ ಶಾ ಇದೀಗ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಗುಜರಾತ್ ಸಿಎಂ ಭೂಪೇಂದ್ರ ಪಟೇಲ್, ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಾಪು, ನಾಗರಿಕ ವಿಮಾನಯಾನ ಸಚಿವ ಮುರಳೀಧರ್ ಮೊಹೋಲ್ ಮತ್ತು ಗುಜರಾತ್ ಗೃಹ ಸಚಿವ ಹರ್ಷ ಸಂಘವಿ ಕೂಡ ಅವರೊಂದಿಗೆ ಇದ್ದರು.
ಈ ವಿಮಾನದಲ್ಲಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, 7 ಪೋರ್ಚುಗೀಸ್ ಮತ್ತು ಒಬ್ಬ ಕೆನಡಾದ ಪ್ರಯಾಣಿಕ ಇದ್ದರು. ಅಹಮದಾಬಾದ್‌ನ ಮೇಘನಿನಗರ ಪ್ರದೇಶದ ಬಳಿಯ ಧಾರ್ಪುರದಿಂದ ಭಾರೀ ಹೊಗೆ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ತುರ್ತು ಪ್ರತಿಕ್ರಿಯೆ ತಂಡಗಳನ್ನು ನಿಯೋಜಿಸಲಾಗಿದೆ. ಅಪಘಾತದ ಕಾರಣವನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ