ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ: ಹೊಸ ಯೋಜನೆಗಳ ಬಗ್ಗೆ ಮಾಹಿತಿ ನೀಡಿದ ಎಡಿಜಿಪಿ ಅಲೋಕ್ ಕುಮಾರ್

Edited By:

Updated on: Dec 17, 2025 | 11:52 AM

ಎಡಿಜಿಪಿ ಅಲೋಕ್ ಕುಮಾರ್ ಕಾರಾಗೃಹಗಳಲ್ಲಿ ಅಕ್ರಮ ಚಟುವಟಿಕೆಗಳನ್ನು ತಡೆಯಲು ಮತ್ತು ಭದ್ರತೆಯನ್ನು ಹೆಚ್ಚಿಸಲು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸುವ ಯೋಜನೆಯನ್ನು ಹಂಚಿಕೊಂಡಿದ್ದಾರೆ. ನಿಷೇಧಿತ ವಸ್ತುಗಳ ಪತ್ತೆ, ಸಿಬ್ಬಂದಿಯ ಮೇಲಿನ ಅವಲಂಬನೆ ಕಡಿಮೆ ಮಾಡುವುದು ಮತ್ತು ಜೈಲುಗಳಲ್ಲಿನ ಅಕ್ರಮ ಜಾಲಗಳನ್ನು ಭೇದಿಸುವುದು ಈ ಉಪಕ್ರಮದ ಮುಖ್ಯ ಗುರಿಗಳಾಗಿವೆ.

ಬೆಂಗಳೂರು, ಡಿಸೆಂಬರ್ 17: ರಾಜ್ಯದ ಕಾರಾಗೃಹಗಳಲ್ಲಿ ಭದ್ರತೆಯನ್ನು ಹೆಚ್ಚಿಸಲು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ. ಜೈಲುಗಳಲ್ಲಿ ನಡೆಯುವ ಮೊಬೈಲ್ ಬಳಕೆ, ಮಾದಕ ವಸ್ತುಗಳ ಸಾಗಣೆ, ಮತ್ತು ಇತರೆ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಈ ತಂತ್ರಜ್ಞಾನ ಪ್ರಮುಖ ಪಾತ್ರ ವಹಿಸಲಿದೆ ಎನ್ನಲಾಗಿದೆ. ಇತ್ತೀಚೆಗೆ ಜೈಲುಗಳು ಹೋಮ್ ಸ್ಟೇ ಅಥವಾ ರೆಸಾರ್ಟ್ಗಳಂತಿವೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಸಿಬ್ಬಂದಿಯ ಬೇಜವಾಬ್ದಾರಿತನ ಮತ್ತು ಲೋಪಗಳನ್ನು ತಪ್ಪಿಸಲು ತಂತ್ರಜ್ಞಾನದ ಸಹಾಯ ಪಡೆಯುವುದು ಅವಶ್ಯಕ ಎಂದು ಅಲೋಕ್ ಕುಮಾರ್ ಹೇಳಿದ್ದಾರೆ. ಎಐ ಆಧಾರಿತ ಭದ್ರತಾ ವ್ಯವಸ್ಥೆಯು ನಿಷೇಧಿತ ವಸ್ತುಗಳನ್ನು ಸುಲಭವಾಗಿ ಪತ್ತೆಹಚ್ಚಲು ನೆರವಾಗಲಿದೆ.

‘ಟಿವಿ9’ ಜತೆ ಮಾತನಾಡಿದ ಅಲೋಕ್ ಕುಮಾರ್, ಜೈಲುಗಳಿಗೆ ಗಾಂಜಾ ಮತ್ತು ಮೊಬೈಲ್ ಸಾಗಣೆಯಂತಹ ಅಕ್ರಮ ಚಟುವಟಿಕೆಗಳ ಸಂಪೂರ್ಣ ಜಾಲವನ್ನು ಭೇದಿಸುವುದು ತಮ್ಮ ಮುಖ್ಯ ಗುರಿ ಎಂದು ತಿಳಿಸಿದ್ದಾರೆ. ಸರಕಾರ ಮತ್ತು ಸಾರ್ವಜನಿಕರು ತಮ್ಮ ಮೇಲೆ ಇಟ್ಟಿರುವ ಭರವಸೆಯನ್ನು ಉಳಿಸಿಕೊಳ್ಳಲು ಎಲ್ಲಾ ಪ್ರಯತ್ನಗಳನ್ನು ಮಾಡುವುದಾಗಿ ಅವರು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Dec 17, 2025 11:28 AM