ಡಿಕೆ ಸುರೇಶ್ ಮತ್ತು ವಿನಯ್ ಕುಲಕರ್ಣಿಯನ್ನು ಉಚ್ಛಾಟಿಸಲಾಗದ ಮಲ್ಲಿಕಾರ್ಜುನ ಖರ್ಗೆ ಸ್ಥಾನ ತ್ಯಜಿಸಬೇಕು: ಕೆಎಸ್ ಈಶ್ವರಪ್ಪ

ಡಿಕೆ ಸುರೇಶ್ ಮತ್ತು ವಿನಯ್ ಕುಲಕರ್ಣಿಯನ್ನು ಉಚ್ಛಾಟಿಸಲಾಗದ ಮಲ್ಲಿಕಾರ್ಜುನ ಖರ್ಗೆ ಸ್ಥಾನ ತ್ಯಜಿಸಬೇಕು: ಕೆಎಸ್ ಈಶ್ವರಪ್ಪ

ಅರುಣ್​ ಕುಮಾರ್​ ಬೆಳ್ಳಿ
|

Updated on: Feb 07, 2024 | 5:22 PM

ಖರ್ಗೆ ಅವರು ಎಚ್ಚರಿಕೆ ಕೊಟ್ಟ ನಂತರವೂ ಸುರೇಶ್ ಮತ್ತು ವಿನಯ್ ಕುಲಕರ್ಣಿ ದೇಶ ವಿರೋಧಿ ಹೇಳಿಕೆ ನೀಡುವುದನ್ನು ಮುಂದುವರಿಸುತ್ತಾರೆ ಅಂದರೆ ಪಕ್ಷದ ಅಧ್ಯಕ್ಷ ಹೇಳುವ ಮಾತಿಗೆ ಯಾವುದೇ ಕಿಮ್ಮತ್ತಿಲ್ಲ ಅನ್ನೊದು ಸ್ಪಷ್ಟವಾಗುತ್ತದೆ, ಅವರ ವಿರುದ್ಧ ಕ್ರಮ ಜರುಗಿಸಲಾಗದಿದ್ದರೆ ಖರ್ಗೆ ತಮ್ಮ ಸ್ಥಾನ ತ್ಯಜಿಸಿಬೇಕು ಎಂದು ಈಶ್ವರಪ್ಪ ಹೇಳಿದರು.

ಶಿವಮೊಗ್ಗ: ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿರುವ ಮಲ್ಲಿಕಾರ್ಜು ಖರ್ಗೆ (Mallikarjun Kharge) ಅವರು ರಾಷ್ಟ್ರದ್ರೋಹಿ (anti national) ಹೇಳಿಕೆ ನೀಡಿರುವ ಸಂಸದ ಡಿಕೆ ಸುರೇಶ್ (DK Suresh) ಮತ್ತು ಶಾಸಕ ವಿನಯ್ ಕುಲಕರ್ಣಿಯನ್ನು ಕೂಡಲೇ ಪಕ್ಷದಿಂದ ಉಚ್ಛಾಟಿಸಬೇಕು ಇಲ್ಲವೇ ಅವರು ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸಬೇಕು ಎಂದು ಹಿರಿಯ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ (KS Eshwarappa) ಹೇಳಿದರು. ನಗರದಲ್ಲಿಂದು ಪತ್ರಿಕಾ ಗೋಷ್ಟಿ ನಡೆಸಿ ಮಾತಾಡಿದ ಅವರು, ದೇಶ ವಿಭಜನೆ ಕಾಂಗ್ರೆಸ್ ನಾಯಕರಿಗೆ ಹೊಸತೇನಲ್ಲ, ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಾಗ ದೇಶವನ್ನು ಕೇವಲ ಅಧಿಕಾರದ ದಾಹಕ್ಕಾಗಿ ಹಿಂದೂಸ್ತಾನ ಮತ್ತು ಪಾಕಿಸ್ತಾನ ಅಂತ ಒಡೆದಿದ್ದು ಅವರೇ ಎಂದರು. ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಯಲ್ಲಿ ವೀರಾವೇಶದಿಂದ, ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ ಒಂದೇ, ಅಖಂಡ ಭಾರತ ಒಡೆಯುವ ಮಾತನ್ನು ಯಾವತ್ತೂ ಸಹಿಸಲ್ಲ ಅಂತ ಹೇಳುತ್ತಾರೆ ಎಂದ ಈಶ್ವರಪ್ಪ, ಖರ್ಗೆ ಅವರು ಹಾಗೆ ಎಚ್ಚರಿಕೆ ಕೊಟ್ಟ ನಂತರವೂ ಸುರೇಶ್ ಮತ್ತು ವಿನಯ್ ಕುಲಕರ್ಣಿ ದೇಶ ವಿರೋಧಿ ಹೇಳಿಕೆ ನೀಡುವುದನ್ನು ಮುಂದುವರಿಸುತ್ತಾರೆ ಅಂದರೆ ಪಕ್ಷದ ಅಧ್ಯಕ್ಷ ಹೇಳುವ ಮಾತಿಗೆ ಯಾವುದೇ ಕಿಮ್ಮತ್ತಿಲ್ಲ ಅನ್ನೊದು ಸ್ಪಷ್ಟವಾಗುತ್ತದೆ, ಅವರ ವಿರುದ್ಧ ಕ್ರಮ ಜರುಗಿಸಲಾಗದಿದ್ದರೆ ಖರ್ಗೆ ತಮ್ಮ ಸ್ಥಾನ ತ್ಯಜಿಸಿಬೇಕು ಎಂದು ಈಶ್ವರಪ್ಪ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ