ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ಎಐಸಿಸಿ ಉತ್ತಮವಾದ ಸೂತ್ರವನ್ನು ರೂಪಿಸಿದೆ: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Mar 28, 2025 | 1:47 PM

ಬಸನಗೌಡ ಪಾಟೀಲ್ ಯತ್ನಾಳ್​ರನ್ನು ಉಚ್ಚಾಟಿಸದ ಬಳಿಕ ಮುಂದಿನ ಸರದಿ, ಎಸ್ ಟಿ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಅವರದ್ದು ಎಂಬ ಸುದ್ದಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಬೇರೆ ಪಕ್ಷಗಳ ಕ್ರಮಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ, ಅವರ ವಕ್ತಾರನಾಗುವುದು ಬೇಕಿಲ್ಲ ಎಂದು ಹೇಳಿ ಕೊಲೆಯತ್ನದ ಬಗ್ಗೆ ಶಾಸಕ ರಾಜೇಂದ್ರ ರಾಜಣ್ಣ ದೂರು ನೀಡಿದ್ದರೆ ಗೃಹ ಸಚಿವ ಗಮನ ಹರಿಸುತ್ತಾರೆ ಎಂದರು.

ದೆಹಲಿ, ಮಾರ್ಚ್ 27: ದೆಹಲಿಯಲ್ಲಿ ಪ್ರವಾಸದಲ್ಲಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷವನ್ನು ಬಲಡಿಸಲು ಎಐಸಿಸಿ (AICC) ತೆಗೆದುಕೊಂಡಿರುವ ಕ್ರಮಗಳನ್ನು ಸ್ವಾಗತಿಸುತ್ತಾ ಮೆಚ್ಚುಗೆ ವ್ಯಕ್ತಪಡಿಸಿದರು. ಪಕ್ಷವನ್ನು ಬಲಪಡಿಸುವ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಎಐಸಿಸಿ ತರಬೇತಿ ಶಿಬಿರವನ್ನು ಏರ್ಪಡಿಸಿತ್ತು, ಮಾಧ್ಯಮದವರ ಜೊತೆ ಹೇಗೆ ವರ್ತಿಸಬೇಕು, ಸಾಮಾಜಿಕ ಜಾಲತಾಣಗಳನ್ನು ಹೇಗೆ ನಿರ್ವಹಿಸಬೇಕು, ಪಕ್ಷದ ಆಸ್ತಿಗಳನ್ನು ಹೇಗೆ ಕಾಯ್ದುಕೊಳ್ಳಬೇಕು ಮತ್ತು ಸದಸ್ಯರ ಸಂಖ್ಯೆಯನ್ನು ಹೇಗೆ ಹೆಚ್ಚಿಸಬೇಕು ಮೊದಲಾದ ವಿಷಯಗಳಲ್ಲಿ ತರಬೇತಿ ನೀಡಲಾಯಿತು ಎಂದು ಶಿವಕುಮಾರ್ ಹೇಳಿದರು.

ವಿಡಿಯೋ ಸ್ಟೋರಿಗಳಿಗಾಗಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸಂವಿಧಾನ ಬದಲಿಸುವ ಮಾತಾಡಿದ್ದರೆ ರಾಜಕೀಯದಿಂದ ನಿವೃತ್ತನಾಗ್ತೀನಿ: ಡಿಕೆ ಶಿವಕುಮಾರ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.