Congress Leaders Press Conference Live: ಡಿಕೆ ಶಿವಕುಮಾರ್, ವೇಣುಗೋಪಾಲ್, ಸುರ್ಜೇವಾಲ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಕೆಲ ದಿನಗಳಿಂದ ಬೆಳವಣಿಗೆಗಳನ್ನು ಗಮನಿಸಿ ಹೈಕಮಾಂಡ್, ರಾತ್ರೋ ರಾತ್ರಿ ಬೆಂಗಳೂರಿಗೆ ಬಂದಿಳಿದಿದೆ. ಕೆಸಿ ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲ ಅವರು ಸಿಎಂ , ಡಿಸಿಎಂ ಜೊತೆ ಸಭೆ ಮಾಡಿದ್ದು, ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಏನೆಲ್ಲಾ ಆಯ್ತು ಎನ್ನುವ ಬಗ್ಗೆ ಕಾಂಗ್ರೆಸ್ ನಾಯಕರು ಸುದ್ದಿಗೋಷ್ಠಿ ನಡೆಸಿದ್ದು, ಅದರ ನೇರಪ್ರಸಾರ ಇಲ್ಲಿದೆ.
ಬೆಂಗಳೂರು, (ನವೆಂಬರ್ 01): ರಾಜ್ಯ ರಾಜಕೀಯದಲ್ಲಿ (Karnataka Politics) ಈಗ ಆಪರೇಷನ್ನದ್ದೇ ಮಾತು. ನಿನ್ನೆಯಷ್ಟೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸರ್ಕಾರ ಮಹಾರಾಷ್ಟ್ರ ಮಾದರಿಯಲ್ಲಿ ಪತನವಾಗುತ್ತೆ ಎಂದು ಬಾಂಬ್ ಸಿಡಿಸಿದ್ದರು. ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕರೇ ಆಪರೇಷನ್ ಕಮಲ(Operation Kamala) ನಡೆಯುತ್ತಿದೆ ಎಂದು ಬಹಿರಂಗವಾಗಿಯೇ ಹೇಳುತ್ತಿದ್ದಾರೆ. ಇದರ ಮಧ್ಯೆ ಎರಡುವರೆ ವರ್ಷದ ಬಳಿಕ ಸಿಎಂ ಹಾಗೂ ಸಚಿವ ಸಂಪುಟ ಬದಲಾವದಣೆ ಬಗ್ಗೆ ಸಿದ್ದರಾಮಮಯ್ಯ(Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಬಣದ ನಡುವೆ ಕಿತ್ತಾಟ ಶುರುವಾಗಿದೆ. ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿ ಹೈಕಮಾಂಡ್, ರಾತ್ರೋ ರಾತ್ರಿ ಬೆಂಗಳೂರಿಗೆ ಬಂದಿಳಿದಿದೆ. ಕೆಸಿ ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲ ಅವರು ಸಿಎಂ , ಡಿಸಿಎಂ ಜೊತೆ ಸಭೆ ಮಾಡಿದ್ದು, ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಏನೆಲ್ಲಾ ಆಯ್ತು ಎನ್ನುವ ಬಗ್ಗೆ ಕಾಂಗ್ರೆಸ್ ನಾಯಕರು ಸುದ್ದಿಗೋಷ್ಠಿ ನಡೆಸಿದ್ದು, ಅದರ ನೇರಪ್ರಸಾರ ಇಲ್ಲಿದೆ.