ಪ್ರಾಸಿಕ್ಯೂಷನ್ ಕಂಟಕ: ಹೇಳಿದ್ದನ್ನೇ ಪದೇಪದೆ ಹೇಳುವುದು ಸರಿಯಲ್ಲವೆಂದು ಸಿಡುಕಿದ ಮಲ್ಲಿಕಾರ್ಜುನ ಖರ್ಗೆ

|

Updated on: Aug 19, 2024 | 12:04 PM

ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆ ಬಿಜೆಪಿ ನಾಯಕರು ಒತ್ತಾಯ ಮಾಡುತ್ತಿದ್ದಾರಲ್ಲ ಎಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಮಲ್ಲಿಕಾರ್ಜುನ ಖರ್ಗೆ ಉತ್ತರಿಸುವ ಗೋಜಿಗೆ ಹೋಗಲಿಲ್ಲ. ಅವರು ಸಹ ಒತ್ತಡದಲ್ಲಿರುವುದು ಇದರಿಂದ ಸ್ಪಷ್ಟವಾಗಿ ಗೊತ್ತಾಗುತ್ತದೆ.

ಬೆಂಗಳೂರು: ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳಿಂದ ಪ್ರಸ್ತುತವಾಗಿ ಸದ್ಯ ನಗರದಲ್ಲಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೊಂಚ ವಿಚಲಿತರಾದಂತೆ ಕಾಣುತ್ತಿದೆ. ಮುಡಾ ಅಕ್ರಮ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖರ್ಗೆ ಈಗಾಗಲೇ ಹೇಳಿಕೆ ನೀಡಿದ್ದಾರೆ. ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳು ಕಾರಲ್ಲಿ ಹೊರಟಿದ್ದ ಖರ್ಗೆಯವರನ್ನು ತಡೆದು ಬಿಜೆಪಿ ನಾಯಕರು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸುತ್ತಿದ್ದಾರೆಯೇ ಎಂದು ಪ್ರಶ್ನಿಸಿದಾಗ ಸಿಡುಕಿದಂತೆ ಕಂಡ ಅವರು ಪದೇಪದೆ ಅದೇ ಮಾತನ್ನು ಚರ್ಚಿಸುವುದರಲ್ಲಿ ಅರ್ಥವಿಲ್ಲ, ನಿನ್ನೆ ಮತ್ತು ಮೊನ್ನೆ ಪಕ್ಷದ ಅಧ್ಯಕ್ಷನಾಗಿ ಹೇಳಿಕೆ ನೀಡಿದ್ದೇನೆ, ನಮ್ಮ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ರಾಜ್ಯಾದಂತ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ ಮತ್ತು ಪತ್ರಿಕಾ ಗೋಷ್ಠಿಗಳನ್ನು ನಡೆಸುತ್ತಿದ್ದಾರೆ, ಎಲ್ಲವನ್ನೂ ಮಾಧ್ಯಮದವರ ಮುಂದೆ ಸ್ಪಷ್ಟಪಡಿಸಲಾಗಿದೆ, ಹಾಗಾಗಿ ಮತ್ತೊಮ್ಮೆ ಹೇಳಿಕೆ ನೀಡುವ ಅಗತ್ಯವಿಲ್ಲ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸದವರು ಕಾಂಗ್ರೆಸ್‌ಗೆ ಸಲಹೆ ನೀಡುತ್ತಿದ್ದಾರೆ; ಮಲ್ಲಿಕಾರ್ಜುನ ಖರ್ಗೆ ಆರೋಪ

Follow us on