ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಮಲ್ಲಿಕಾರ್ಜುನ ಖರ್ಗೆ
ಉತ್ತರ ಕರ್ನಾಟದ ಭಾಗದಲ್ಲಿ ಹುಟ್ಟಬೇಕಿತ್ತು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತೀಕ್ಷ್ಣವಾಗಿ ಟಾಂಗ್ ಕೊಟ್ಟಿದ್ದಾರೆ. ಕಲಬುರಗಿ ಜಿಲ್ಲೆ ಯಡ್ರಾಮಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಖರ್ಗೆ, ಈ ಭಾಗದಲ್ಲಿ ಹುಟ್ಟಬೇಕಿತ್ತು ಎಂದು ಡಿ.ಕೆ.ಶಿವಕುಮಾರ್ ಹೇಳುತ್ತಾರೆ. ನೀವು ಇಲ್ಲಿ ಹುಟ್ಟುವುದು ಬೇಡ. ನಾವು ಅಲ್ಲಿ ಹುಟ್ಟುವುದು ಬೇಡ. ನಿಮ್ಮ ಮೈಸೂರು, ಬೆಂಗಳೂರಿನ ರೀತಿ ಅಭಿವೃದ್ಧಿ ಮಾಡಿ ಸಾಕು ಎಂದಿದ್ದಾರೆ.
ಕಲಬುರಗಿ, (ಜನವರಿ 12): ಉತ್ತರ ಕರ್ನಾಟದ ಭಾಗದಲ್ಲಿ ಹುಟ್ಟಬೇಕಿತ್ತು ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun kharge) ಅವರು ತೀಕ್ಷ್ಣವಾಗಿ ಟಾಂಗ್ ಕೊಟ್ಟಿದ್ದಾರೆ. ಕಲಬುರಗಿ ಜಿಲ್ಲೆ ಯಡ್ರಾಮಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಖರ್ಗೆ, ಈ ಭಾಗದಲ್ಲಿ ಹುಟ್ಟಬೇಕಿತ್ತು ಎಂದು ಡಿ.ಕೆ.ಶಿವಕುಮಾರ್ ಹೇಳುತ್ತಾರೆ. ನೀವು ಇಲ್ಲಿ ಹುಟ್ಟುವುದು ಬೇಡ. ನಾವು ಅಲ್ಲಿ ಹುಟ್ಟುವುದು ಬೇಡ. ನಿಮ್ಮ ಮೈಸೂರು, ಬೆಂಗಳೂರಿನ ರೀತಿ ಅಭಿವೃದ್ಧಿ ಮಾಡಿ ಸಾಕು. ಮುಖ್ಯಮಂತ್ರಿ ಹಾಗೂ ಡಿಸಿಎಂ ಈ ಭಾಗದ ಬಗ್ಗೆ ಗಮನ ಕೊಡಿ. ದೆಹಲಿಯಿಂದ ಬಂದು ನಾನು ಜನರಿಗೆ ಪ್ರಚೋದನೆ ಕೊಡ್ತಿಲ್ಲ. ಅದರ ಬದಲಾಗಿ ನಿಮ್ಮ ಭಾಗದಷ್ಟೇ ನಮ್ಮ ಭಾಗವನ್ನು ಅಭಿವೃದ್ಧಿ ಮಾಡಿ ಎಂದಿದ್ದಾರೆ.
