ಪ್ರತಿಭಟನೆಯ ಬಳಿಕ ತಾಳ ಹಾಕುತ್ತಿದ್ದ ಕಾಂಗ್ರೆಸ್ ನಾಯಕರ ಹೊಟ್ಟೆಗೆ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಭರ್ಜರಿ ಭೋಜನ!

|

Updated on: Feb 07, 2024 | 4:26 PM

ಬೆಂಗಳೂರು ಮತ್ತು ರಾಜ್ಯದ ಬೇರೆ ಬೇರೆ ಭಾಗಗಳಿಂದ ದೆಹಲಿಗೆ ತೆರಳಿ ಪ್ರತಿಭಟನೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರಿಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರ ದೆಹಲಿ ನಿವಾಸದಲ್ಲಿ ಔತಣ ಕೂಟ ಏರ್ಪಡಿಸಲಾಗಿತ್ತು.

ದೆಹಲಿ: ಕೇಂದ್ರ ಸರ್ಕಾರದ ವಿರುದ್ದ ನಗರದ ಜಂತರ್ ಮಂತರ್ ಮೈದಾನದಲ್ಲಿ ಪ್ರತಿಭಟನೆ ನಡೆಸಿ ಘೋಷಣೆಗಳನ್ನು ಕೂಗಿದ ರಾಜ್ಯದ ಕಾಂಗ್ರೆಸ್ ನಾಯಕರ (Congress leaders) ಹೊಟ್ಟೆ ಹಸಿದಿತ್ತು ಮತ್ತು ಪ್ರತಿಭಟನೆಗಾಗಿ ನೀಡಿದ ಸಮಯವೂ ಕೊನೆಗೊಂಡಿತ್ತು. ಬೆಂಗಳೂರು ಮತ್ತು ರಾಜ್ಯದ ಬೇರೆ ಬೇರೆ ಭಾಗಗಳಿಂದ ದೆಹಲಿಗೆ ತೆರಳಿ ಪ್ರತಿಭಟನೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರಿಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವ (AICC president) ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರ ದೆಹಲಿ ನಿವಾಸದಲ್ಲಿ ಔತಣ ಕೂಟ ಏರ್ಪಡಿಸಲಾಗಿತ್ತು. ಒಂದು ಟೇಬಲ್ ಸುತ್ತ ಖುದ್ದು ಖರ್ಗೆ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಆರ್ ವಿ ದೇಶಪಾಂಡೆ, ಹೆಚ್ ಕೆ ಪಾಟೀಲ್, ಹೆಚ್ ಸಿ ಮಹಾದೇವಪ್ಪ, ಜಿ ಪರಮೇಶ್ವರ್, ಕೆ ಹೆಚ್ ಮುನಿಯಪ್ಪ, ಅಬ್ದುಲ್ ನಾಸಿರ್ ಮೊದಲಾದವರೆಲ್ಲ ಸೂಪು ಕುಡಿಯುತ್ತ ಚಿಕನ್ ಕಬಾಬ್ ತಿನ್ನುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ಶಿವಕುಮಾರ್ ಯಾವುದೋ ವ್ರತ ಆಚರಿಸುತ್ತಿರುವಂತಿದೆ, ಅವರು ಊಟ ಮಾಡುತ್ತಿಲ್ಲ, ಹಣ್ಣಿನ ಜ್ಯೂಸ್ ಕುಡಿಯುತ್ತಿದ್ದಾರೆ. ಸಿದ್ದರಾಮಯ್ಯರನ್ನು ಯಾವುದೋ ಗಹನವಾದ ಚರ್ಚೆಗೆ ಎಳೆದಿರುವ ತನ್ವೀರ್ ಸೇಟ್ ಮುಖ್ಯಮಂತ್ರಿಯನ್ನು ಊಟ ಮಾಡಲು ಬಿಡುತ್ತಿಲ್ಲ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ