NDA ವಿರುದ್ಧ ಕಿಡಿ ಕಾರಿದ ಖರ್ಗೆ: AICC ಅಧ್ಯಕ್ಷರು ಹೇಳಿದ್ದೇನು?

Edited By:

Updated on: Sep 29, 2025 | 5:30 PM

ಬಿಹಾರದಲ್ಲಿ ಚುನಾವಣೆ ಸಂದರ್ಭ ಮಹಿಳೆಯರಿಗೆ 10 ಸಾವಿರ ರೂ. ನೀಡಲು ಮುಂದಾಗಿರೋ NDA ಬಗ್ಗೆ ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ. ನರೇಗಾ, ಫುಡ್​ ಸೆಕ್ಯೂರಿಟಿ ಸೇರಿ ಮುಂತಾದ ಕಾರ್ಯಕ್ರಮಗಳನ್ನ ಬಡವರಿಗಾಗಿ ನಾವು ತಂದಿದ್ದೇವೆ. NDA ಹಣ ನೀಡುತ್ತಿರೋದು ಕೇವಲ ಚುನಾವಣಾ ದೃಷ್ಟಿಯಿಂದ ಮಾತ್ರ ಎಂದು ಖರ್ಗೆ ಆರೋಪಿಸಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್​ 29: ಕಾಂಗ್ರೆಸ್ ಸರ್ಕಾರದ​ ಗ್ಯಾರಂಟಿಗಳನ್ನ ವಿರೋಧಿಸಿ ಬಿಹಾರದಲ್ಲಿ (Bihar) ಮಹಿಳೆಯರಿಗೆ 10 ಸಾವಿರ ರೂ. ನೀಡಲು ಮುಂದಾಗಿರೋ NDA ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕಿಡಿ ಕಾರಿದ್ದಾರೆ. ಅವರು ಮಾಡೋದು ಎಲ್ಲ ಸರಿ. ಆದ್ರೆ ನಾವು ಮಾಡಿದ್ರೆ ಅದರ ಬಗ್ಗೆ ಟೀಕೆ ಟಿಪ್ಪಣಿ ಮಾಡ್ತಾರೆ. ಕೇಳಿದರೆ ನಮ್ಮ ಮೇಲೆ ಗೂಬೆ ಕೂರಿಸ್ತಾರೆ. ನರೇಗಾ, ಫುಡ್​ ಸೆಕ್ಯೂರಿಟಿ ಸೇರಿ ಮುಂತಾದ ಕಾರ್ಯಕ್ರಮಗಳನ್ನ ಬಡವರಿಗಾಗಿ ನಾವು ತಂದಿದ್ದೇವೆ. ಇವರು ಹಣ ನೀಡುತ್ತಿರೋದು ಕೇವಲ ಚುನಾವಣಾ ದೃಷ್ಟಿಯಿಂದ ಮಾತ್ರ ಎಂದು ಖರ್ಗೆ ಆರೋಪಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More