ಡಿಕೆ ಶಿವಕುಮಾರ್ RSS ಗೀತೆ: ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ
ವಿಧಾನಸಭೆಯಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಆರ್ ಎಸ್ಎಸ್ ಗೀತೆ ಹಾಡಿ ಸ್ವಪಕ್ಷದ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಆರ್ ಎಸ್ಎಸ್ ಪ್ರಾರ್ಥನಾ ಗೀತೆಯಾದ ನಮಸ್ತೇ ಸದಾ ವತ್ಸಲೇ ಮಾತೃಭೂಮೇ ಎಂದು ಡಿಕೆ ಶಿವಕುಮಾರ್ ಸದನದಲ್ಲೇ ಹಾಡಿದ್ದು, ಈ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕರಿಂದ ಹಿಡಿದು ಸಣ್ಣ ಕಾರ್ಯಕರ್ತರು ಸಹ ಖಂಡಿಸಿದ್ದಾರೆ. ಭಾರೀ ವಿರೋಧ ವ್ಯಕ್ತವಾದ ಬಳಿಕ ಡಿಕೆಶಿ, ಕ್ಷೆಮೆಯಾಚಿಸಿದ್ದಾರೆ. ಇದೀಗ ಈ ಬಗ್ಗೆ ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು, (ಆಗಸ್ಟ್ 27):ವಿಧಾನಸಭೆಯಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಆರ್ ಎಸ್ಎಸ್ ಗೀತೆ ಹಾಡಿ ಸ್ವಪಕ್ಷದ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಆರ್ ಎಸ್ಎಸ್ ಪ್ರಾರ್ಥನಾ ಗೀತೆಯಾದ ನಮಸ್ತೇ ಸದಾ ವತ್ಸಲೇ ಮಾತೃಭೂಮೇ ಎಂದು ಡಿಕೆ ಶಿವಕುಮಾರ್ ಸದನದಲ್ಲೇ ಹಾಡಿದ್ದು, ಈ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕರಿಂದ ಹಿಡಿದು ಸಣ್ಣ ಕಾರ್ಯಕರ್ತರು ಸಹ ಖಂಡಿಸಿದ್ದಾರೆ. ಭಾರೀ ವಿರೋಧ ವ್ಯಕ್ತವಾದ ಬಳಿಕ ಡಿಕೆಶಿ, ಕ್ಷೆಮೆಯಾಚಿಸಿದ್ದಾರೆ. ಇದೀಗ ಈ ಬಗ್ಗೆ ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದು. ಸದನದಲ್ಲಿ ಡಿಸಿಎಂ ಡಿಕೆ ಆರ್ ಎಸ್ಎಸ್ ಗೀತೆ ಹೇಳಬಾರದಿತ್ತು. ಹಾಡಿದ್ದಕ್ಕೆ ಅವರು ಕ್ಷಮೆಯಾಚಿಸಿದ್ದಾರೆ. ಅಲ್ಲಿಗೆ ಎಲ್ಲ ಮುಗೀತು. ಪದೇಪದೆ ಅದನ್ನು ಎತ್ತಿಹಿಡಿಯುವುದು ಬೇಡ. ಕ್ಲೋಸ್ ಆದ ಕೇಸ್ ಓಪನ್ ಮಾಡುವುದಕ್ಕೆ ನಾನು ಹೋಗಲ್ಲ. ಇನ್ಮುಂದೆ ಯಾರೂ ಹೀಗೆ ಮಾಡಬಾರದು ಎಂದು ಎಚ್ಚರಿಕೆ ನೀಡಿದರು.

