ಡಿಕೆ ಶಿವಕುಮಾರ್ RSS ಗೀತೆ: ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

Updated on: Aug 27, 2025 | 3:34 PM

ವಿಧಾನಸಭೆಯಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಆರ್​ ಎಸ್​ಎಸ್ ಗೀತೆ ಹಾಡಿ ಸ್ವಪಕ್ಷದ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಆರ್​​ ಎಸ್​​ಎಸ್​ ಪ್ರಾರ್ಥನಾ ಗೀತೆಯಾದ ನಮಸ್ತೇ ಸದಾ ವತ್ಸಲೇ ಮಾತೃಭೂಮೇ ಎಂದು ಡಿಕೆ ಶಿವಕುಮಾರ್ ಸದನದಲ್ಲೇ ಹಾಡಿದ್ದು, ಈ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕರಿಂದ ಹಿಡಿದು ಸಣ್ಣ ಕಾರ್ಯಕರ್ತರು ಸಹ ಖಂಡಿಸಿದ್ದಾರೆ. ಭಾರೀ ವಿರೋಧ ವ್ಯಕ್ತವಾದ ಬಳಿಕ ಡಿಕೆಶಿ, ಕ್ಷೆಮೆಯಾಚಿಸಿದ್ದಾರೆ. ಇದೀಗ ಈ ಬಗ್ಗೆ ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು, (ಆಗಸ್ಟ್ 27):ವಿಧಾನಸಭೆಯಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಆರ್​ ಎಸ್​ಎಸ್ ಗೀತೆ ಹಾಡಿ ಸ್ವಪಕ್ಷದ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಆರ್​​ ಎಸ್​​ಎಸ್​ ಪ್ರಾರ್ಥನಾ ಗೀತೆಯಾದ ನಮಸ್ತೇ ಸದಾ ವತ್ಸಲೇ ಮಾತೃಭೂಮೇ ಎಂದು ಡಿಕೆ ಶಿವಕುಮಾರ್ ಸದನದಲ್ಲೇ ಹಾಡಿದ್ದು, ಈ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕರಿಂದ ಹಿಡಿದು ಸಣ್ಣ ಕಾರ್ಯಕರ್ತರು ಸಹ ಖಂಡಿಸಿದ್ದಾರೆ. ಭಾರೀ ವಿರೋಧ ವ್ಯಕ್ತವಾದ ಬಳಿಕ ಡಿಕೆಶಿ, ಕ್ಷೆಮೆಯಾಚಿಸಿದ್ದಾರೆ. ಇದೀಗ ಈ ಬಗ್ಗೆ ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದು. ಸದನದಲ್ಲಿ ಡಿಸಿಎಂ ಡಿಕೆ ಆರ್ ಎಸ್ಎಸ್ ಗೀತೆ ಹೇಳಬಾರದಿತ್ತು. ಹಾಡಿದ್ದಕ್ಕೆ ಅವರು ಕ್ಷಮೆಯಾಚಿಸಿದ್ದಾರೆ. ಅಲ್ಲಿಗೆ ಎಲ್ಲ ಮುಗೀತು. ಪದೇಪದೆ ಅದನ್ನು ಎತ್ತಿಹಿಡಿಯುವುದು ಬೇಡ. ಕ್ಲೋಸ್ ಆದ ಕೇಸ್ ಓಪನ್ ಮಾಡುವುದಕ್ಕೆ ನಾನು ಹೋಗಲ್ಲ. ಇನ್ಮುಂದೆ ಯಾರೂ ಹೀಗೆ ಮಾಡಬಾರದು ಎಂದು ಎಚ್ಚರಿಕೆ ನೀಡಿದರು.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More