Congress releases manifesto, Watch it Live: ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಖರ್ಗೆ

Congress releases manifesto, Watch it Live: ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಖರ್ಗೆ

ಅರುಣ್​ ಕುಮಾರ್​ ಬೆಳ್ಳಿ
|

Updated on: May 02, 2023 | 11:33 AM

ಕೆಲಸಕ್ಕೆ ಹೋಗುವ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಖರ್ಗೆ ಹೇಳಿದರು.

ಬೆಂಗಳೂರು: ನಗರದ ಖಾಸಗಿ ಹೋಟೆಲೊಂದರಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯ ವಿಧಾನಸಭಾ ಚುನಾವಣೆಗೆ ಪ್ರಣಾಳಿಕೆಯನ್ನು (manifesto) ಬಿಡುಗಡೆ ಮಾಡಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ (AICC) ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ ಅದರಲ್ಲಿ ನೀಡಿರುವ ಭರವಸೆಗಳ ಬಗ್ಗೆ ಸಂಕ್ಷಿಪ್ತ ವಿವರಣೆ ನೀಡಿದರು. ಪ್ರಣಾಳಿಕೆ ಬಿಡುಗಡೆ ಮಾಡುವ ಮೊದಲು ಚುನಾವಣಾ ಪ್ರಚಾರ ಭಾಷಣಗಳಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತು ಇತರ ನಾಯಕರು ಪ್ರಸ್ತಾಪಿಸುತ್ತಿದ್ದ ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ಸೇರಿಸಲಾಗಿದೆ ಮತ್ತು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೊದಲ ಸಂಪುಟ ಸಭೆಯಲ್ಲೇ ಈ ಯೋಜನೆಗಳ ಅನುಷ್ಠಾನಕ್ಕೆ ಆದೇಶ ಜಾರಿಮಾಡಲಾಗುವುದು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಕೆಲಸಕ್ಕೆ ಹೋಗುವ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಖರ್ಗೆ ಹೇಳಿದರು. ಪ್ರಣಾಳಿಕೆಯಲ್ಲಿರುವ ಎಲ್ಲ ಆಶ್ವಾಸನೆಗಳ ಬಗ್ಗೆ ಮಾಹಿತಿ ಪಡೆಯಲು ಪೂರ್ತಿ ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ