AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಮ್ಸ್ ಆಸ್ಪತ್ರೆ ಲಿಫ್ಟ್‌ನಲ್ಲಿ ಸರಗಳ್ಳತನ, ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಏಮ್ಸ್ ಆಸ್ಪತ್ರೆ ಲಿಫ್ಟ್‌ನಲ್ಲಿ ಸರಗಳ್ಳತನ, ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಅಕ್ಷಯ್​ ಪಲ್ಲಮಜಲು​​
|

Updated on: Jan 27, 2026 | 3:26 PM

Share

ಮಧ್ಯಪ್ರದೇಶದ ಏಮ್ಸ್ ಭೋಪಾಲ್ ಆಸ್ಪತ್ರೆಯಲ್ಲಿ ಮಹಿಳಾ ಸಿಬ್ಬಂದಿಯ ಚಿನ್ನದ ಸರಗಳ್ಳತನ ನಡೆದಿದ್ದು, ಸಿಸಿಟಿವಿ ದೃಶ್ಯ ವೈರಲ್ ಆಗಿದೆ. ಜನವರಿ 27 ರಂದು ಲಿಫ್ಟ್‌ನಲ್ಲಿ ಒಬ್ಬರೇ ಇದ್ದಾಗ ದುಷ್ಕರ್ಮಿ ಸರ ಕಿತ್ತು ಪರಾರಿಯಾಗಿದ್ದಾನೆ. ಭದ್ರತಾ ವೈಫಲ್ಯದ ಬಗ್ಗೆ ಸಿಬ್ಬಂದಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ಭದ್ರತೆ ಕಲ್ಪಿಸುವಂತೆ ವೈದ್ಯರು ಮತ್ತು ನರ್ಸಿಂಗ್ ಸಿಬ್ಬಂದಿಗಳು ಆಸ್ಪತ್ರೆಯ ಆವರಣದಲ್ಲಿ ಪ್ರತಿಭಟನೆ ನಡೆಸಿ, ತಮ್ಮ ಕೆಲಸದ ಸ್ಥಳದ ರಕ್ಷಣೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಮಧ್ಯಪ್ರದೇಶ, ಜ.27: AIIMS ಭೋಪಾಲ್ ಆಸ್ಪತ್ರೆ ಒಳಗಡೆ ಇದ್ದ ಮಹಿಳಾ ಸಿಬ್ಬಂದಿಯ ಬಂಗಾರದ ಚೈನ್​​​​ ಕದ್ದಿರುವ ಘಟನೆ ನಡೆದಿದೆ. ಈ ಬಗ್ಗೆ ಸಿಸಿಟಿವಿಯಲ್ಲಿ ದೃಶ್ಯ ವೈರಲ್​​ ಆಗಿದೆ. ಆಸ್ಪತ್ರೆಯ ಲಿಫ್ಟ್ನಲ್ಲಿ ಮಹಿಳಾ ಉದ್ಯೋಗಿಯ ಸರಗಳ್ಳತನ ನಡೆದಿದೆ. ಆಸ್ಪತ್ರೆಯ ಮಹಿಳಾ ಉದ್ಯೋಗಿಯೊಬ್ಬರು ಕೆಲಸದ ನಿಮಿತ್ತ ಲಿಫ್ಟ್‌ನಲ್ಲಿ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಲಿಫ್ಟ್ ಒಳಗೆ ಮಹಿಳೆ ಒಬ್ಬರೇ ಇದ್ದದ್ದನ್ನು ಗಮನಿಸಿದ ದುಷ್ಕರ್ಮಿ, ಲಿಫ್ಟ್ ಚಲಿಸುತ್ತಿರುವಾಗಲೇ ಅವರ ಕತ್ತಿನಲ್ಲಿದ್ದ ಸರವನ್ನು ಬಲವಂತವಾಗಿ ಕಿತ್ತುಕೊಂಡಿದ್ದಾನೆ. ಲಿಫ್ಟ್ ಬಾಗಿಲು ತೆರೆಯುತ್ತಿದ್ದಂತೆಯೇ ಆತ ಅಲ್ಲಿಂದ ಪರಾರಿಯಾಗಿದ್ದಾನೆ. ಆಸ್ಪತ್ರೆಯ ಲಿಫ್ಟ್‌ಗಳಲ್ಲಿ ಸಾಮಾನ್ಯವಾಗಿ ಸಿಸಿಟಿವಿ ಕ್ಯಾಮೆರಾಗಳು ಇರುತ್ತವೆ. ಇಷ್ಟಿದ್ದರೂ ದುಷ್ಕರ್ಮಿಗೆ ಭಯವಿಲ್ಲದೆ ಕೃತ್ಯ ಎಸಗಿರುವುದು ಭದ್ರತಾ ಸಿಬ್ಬಂದಿಯ ವೈಫಲ್ಯ ಎಂದು ಸಿಬ್ಬಂದಿ ವರ್ಗ ಆಕ್ರೋಶ ವ್ಯಕ್ತಪಡಿಸಿದೆ. ಈ ಘಟನೆಯ ನಂತರ AIIMS ವೈದ್ಯರು ಮತ್ತು ನರ್ಸಿಂಗ್ ಸಿಬ್ಬಂದಿಗಳು ಆಸ್ಪತ್ರೆಯ ಆವರಣದಲ್ಲಿ ಭದ್ರತೆಯನ್ನು ಹೆಚ್ಚಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಮಹಿಳಾ ಸಿಬ್ಬಂದಿಗಳಿಗೆ ಕೆಲಸದ ಸ್ಥಳದಲ್ಲಿ ರಕ್ಷಣೆ ಇಲ್ಲದಿದ್ದರೆ ಕೆಲಸ ಮಾಡುವುದು ಕಷ್ಟ ಎಂದು ಅವರು ಅಳಲು ತೋಡಿಕೊಂಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ