Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: 169 ಮಂದಿ ಪ್ರಯಾಣಿಕರಿದ್ದ ವಿಮಾನದಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ

Video: 169 ಮಂದಿ ಪ್ರಯಾಣಿಕರಿದ್ದ ವಿಮಾನದಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ

ನಯನಾ ರಾಜೀವ್
|

Updated on:Jan 29, 2025 | 9:21 AM

ಮಂಗಳವಾರ ರಾತ್ರಿ ದಕ್ಷಿಣ ಕೊರಿಯಾದ ಗಿಮ್ಹೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಅಪಘಾತವನ್ನು ತಪ್ಪಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿತ್ತು. ಅದಕ್ಕೂ ಮುನ್ನ ವಿಮಾನ ಟೇಕಾಫ್ ಆಗಲು ತಯಾರಾಗುತ್ತಿದ್ದಾಗ ಈ ಬೆಂಕಿ ಕಾಣಿಸಿಕೊಂಡಿದೆ. ವಿಮಾನದಲ್ಲಿ 169 ಪ್ರಯಾಣಿಕರಿದ್ದರು ಎಂದು ಹೇಳಲಾಗುತ್ತಿದೆ.

ಮಂಗಳವಾರ ರಾತ್ರಿ ದಕ್ಷಿಣ ಕೊರಿಯಾದ ಗಿಮ್ಹೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಅಪಘಾತವನ್ನು ತಪ್ಪಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿತ್ತು.  ವಿಮಾನ ಟೇಕಾಫ್ ಆಗಲು ತಯಾರಾಗುತ್ತಿದ್ದಾಗ ಈ ಬೆಂಕಿ ಕಾಣಿಸಿಕೊಂಡಿದೆ. ವಿಮಾನದಲ್ಲಿ 169 ಪ್ರಯಾಣಿಕರಿದ್ದರು ಎಂದು ಹೇಳಲಾಗುತ್ತಿದೆ.

ಮಾಹಿತಿ ಪ್ರಕಾರ, ಈ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಹೊರತೆಗೆಯಲಾಗಿದೆ. ಈ ಏರ್ ಬುಸಾನ್ ವಿಮಾನ A321 ಆಗ್ನೇಯ ನಗರವಾದ ಬುಸಾನ್‌ನಿಂದ ಹಾಂಗ್ ಕಾಂಗ್‌ಗೆ ಟೇಕ್ ಆಫ್ ಮಾಡಲು ತಯಾರಿ ನಡೆಸುತ್ತಿದ್ದಾಗ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ಮೊದಲ ಮಾಹಿತಿ ಸಿಕ್ಕಿತು. ಇದಾದ ನಂತರ 45 ಅಗ್ನಿಶಾಮಕ ದಳದ ವಾಹನಗಳು ತಕ್ಷಣ ಸ್ಥಳಕ್ಕೆ ಆಗಮಿಸಿದವು.

ರಾತ್ರಿ 10.30 ರ ಸುಮಾರಿಗೆ ಈ ಘಟನೆ ನಡೆದಿದೆ. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗುತ್ತಿದೆ. ಅಗ್ನಿಶಾಮಕ ದಳದವರು ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಿಸಿದ್ದಾರೆ. ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Jan 29, 2025 09:21 AM