ಲಕ್ನೋದಲ್ಲಿ ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಗಾಂಧಿ ಇದ್ದ ಏರ್ ಇಂಡಿಯಾ ವಿಮಾನ

Updated on: Sep 09, 2026 | 7:14 AM

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನವು ಹವಾಮಾನ ವೈಪರೀತ್ಯದ ಕಾರಣದಿಂದಾಗಿ ಲಕ್ನೋದ ಚೌಧರಿ ಚರಣ್ ಸಿಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ತಾಂತ್ರಿಕ ಸವಾಲು ಎದುರಿಸಿತು. ದೆಹಲಿಯಿಂದ ಹೊರಟಿದ್ದ ವಿಮಾನವು ಮೊದಲ ಪ್ರಯತ್ನದಲ್ಲಿ ಲ್ಯಾಂಡ್ ಆಗಲು ಸಾಧ್ಯವಾಗದೆ, ಪೈಲಟ್‌ನ ಸಮಯಪ್ರಜ್ಞೆಯಿಂದಾಗಿ ಎರಡನೇ ಪ್ರಯತ್ನದಲ್ಲಿ ಸುರಕ್ಷಿತವಾಗಿ ರನ್‌ವೇ ಮೇಲೆ ಇಳಿದಿದೆ.

ಲಕ್ನೋ,ಸೆಪ್ಟೆಂಬರ್ 09: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ  ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನವು ಹವಾಮಾನ ವೈಪರೀತ್ಯದ ಕಾರಣದಿಂದಾಗಿ ಲಕ್ನೋದ ಚೌಧರಿ ಚರಣ್ ಸಿಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ತಾಂತ್ರಿಕ ಸವಾಲು ಎದುರಿಸಿತು.

ದೆಹಲಿಯಿಂದ ಹೊರಟಿದ್ದ ವಿಮಾನವು ಮೊದಲ ಪ್ರಯತ್ನದಲ್ಲಿ ಲ್ಯಾಂಡ್ ಆಗಲು ಸಾಧ್ಯವಾಗದೆ, ಪೈಲಟ್‌ನ ಸಮಯಪ್ರಜ್ಞೆಯಿಂದಾಗಿ ಎರಡನೇ ಪ್ರಯತ್ನದಲ್ಲಿ ಸುರಕ್ಷಿತವಾಗಿ ರನ್‌ವೇ ಮೇಲೆ ಇಳಿದಿದೆ. ದೆಹಲಿಯಿಂದ ಲಕ್ನೋಗೆ ತೆರಳುತ್ತಿದ್ದ ಏರ್ ಇಂಡಿಯಾ (AI 1717) ವಿಮಾನವು ಮಧ್ಯಾಹ್ನ 3.45ಕ್ಕೆ ಮೊದಲ ಬಾರಿಗೆ ಲ್ಯಾಂಡಿಂಗ್ ಮಾಡಲು ಯತ್ನಿಸಿತು. ಆದರೆ ದಿಢೀರ್ ಹವಾಮಾನ ವೈಪರೀತ್ಯ ಮತ್ತು ಗಾಳಿಯ ದಿಕ್ಕಿನ ಬದಲಾವಣೆಯಿಂದಾಗಿ ಪೈಲಟ್ ಲ್ಯಾಂಡಿಂಗ್ ಅನ್ನು ಅರ್ಧದಲ್ಲೇ ಕೈಬಿಟ್ಟು ವಿಮಾನವನ್ನು ಮತ್ತೆ ಮೇಲಕ್ಕೆ ಕೊಂಡೊಯ್ದರು . ಆಕಾಶದಲ್ಲಿ ಕೆಲ ನಿಮಿಷ ಸುತ್ತು ಹೊಡೆದ ನಂತರ, ಮಧ್ಯಾಹ್ನ 3.55ಕ್ಕೆ ಪೈಲಟ್ ವಿಮಾನವನ್ನು ಅತ್ಯಂತ ಸುರಕ್ಷಿತವಾಗಿ ರನ್‌ವೇ ಮೇಲೆ ಇಳಿಸುವಲ್ಲಿ ಯಶಸ್ವಿಯಾದರು.

ರಾಹುಲ್ ಗಾಂಧಿ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸಂಪೂರ್ಣ ಸುರಕ್ಷಿತವಾಗಿದ್ದು, ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ದೃಢಪಡಿಸಿದ್ದಾರೆ.
ತಮ್ಮ ಲೋಕಸಭಾ ಕ್ಷೇತ್ರವಾದ ರಾಯಬರೇಲಿಯಲ್ಲಿ ಎರಡು ದಿನಗಳ ಕಾಲ ವಿವಿಧ ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಪಕ್ಷದ ಸಭೆಗಳಲ್ಲಿ ಭಾಗವಹಿಸಲು ರಾಹುಲ್ ಗಾಂಧಿ ಲಕ್ನೋ ಮಾರ್ಗವಾಗಿ ರಸ್ತೆ ಮೂಲಕ ತೆರಳುತ್ತಿದ್ದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us