ಯುದ್ಧದ ಬಿಸಿ: ವಿಮಾನ ಟಿಕೆಟ್ ದರವೂ ಏರಿಕೆ, ಪ್ರಯಾಣಿಕರು ಕಂಗಾಲು

Updated on: Mar 15, 2026 | 6:33 AM

ಭಾರತೀಯ ವಿಮಾನಯಾನ ಸಂಸ್ಥೆಗಳಾದ ಇಂಡಿಗೋ, ಏರ್ ಇಂಡಿಯಾ, ಆಕಾಶ ಏರ್‌ಲೈನ್ಸ್ ಇಂಧನ ಶುಲ್ಕವನ್ನು ವಿಧಿಸಲು ಆರಂಭಿಸಿವೆ. ಇಸ್ರೇಲ್-ಇರಾನ್ ಯುದ್ಧದ ಪರಿಣಾಮವಾಗಿ ಇಂಧನ ಬೆಲೆ ಏರಿಕೆಯಾಗಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದಾಗಿ ವಿಮಾನ ಟಿಕೆಟ್ ದರ ಏರಿಕೆಯಾಗಿದ್ದು, ದೇಶೀಯ ಮತ್ತು ಅಂತಾರಾಷ್ಟ್ರೀಯ ಪ್ರಯಾಣಿಕರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ.

ಬೆಂಗಳೂರು, ಮಾರ್ಚ್ 15: ಭಾರತದಲ್ಲಿ ವಿಮಾನ ಪ್ರಯಾಣವು ಮತ್ತಷ್ಟು ದುಬಾರಿಯಾಗಿದ್ದು, ಇಂಡಿಗೋ, ಏರ್ ಇಂಡಿಯಾ ಮತ್ತು ಆಕಾಸ ಏರ್‌ಲೈನ್ಸ್‌ನಂತಹ ಪ್ರಮುಖ ವಿಮಾನಯಾನ ಸಂಸ್ಥೆಗಳು ಇಂಧನ ಶುಲ್ಕವನ್ನು ವಿಧಿಸಲು ಪ್ರಾರಂಭಿಸಿವೆ. ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧವು ಮಧ್ಯಪ್ರಾಚ್ಯದಲ್ಲಿ ಇಂಧನ ಬೆಲೆಗಳ ಮೇಲೆ ಪರಿಣಾಮ ಬೀರಿದ್ದು, ಭಾರತೀಯ ಜನಸಾಮಾನ್ಯರ ಮೇಲೆ ನೇರವಾಗಿ ಪ್ರಭಾವ ಬೀರಿದೆ. ಈ ನಿರ್ಧಾರದಿಂದಾಗಿ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ದರಗಳು ಏರಿಕೆಯಾಗಿವೆ.

ಇಂಡಿಗೋ ವಿಮಾನಯಾನ ಸಂಸ್ಥೆಯು ಭಾರತದೊಳಗಿನ ಪ್ರಯಾಣಕ್ಕೆ ಪ್ರತಿ ಟಿಕೆಟ್‌ಗೆ 425 ರೂ. ಇಂಧನ ಶುಲ್ಕವನ್ನು ವಿಧಿಸುತ್ತಿದೆ. ಮಧ್ಯಪ್ರಾಚ್ಯಕ್ಕೆ 900 ರೂ., ಆಗ್ನೇಯ ಏಷ್ಯಾ, ಚೀನಾ, ಆಫ್ರಿಕಾ ಮತ್ತು ಪಶ್ಚಿಮ ಏಷ್ಯಾದಂತಹ ಪ್ರದೇಶಗಳಿಗೆ 1,800 ರೂ. ಮತ್ತು ಯುರೋಪ್‌ಗೆ ತೆರಳುವ ವಿಮಾನಗಳಿಗೆ 2,300 ರೂ. ಶುಲ್ಕ ನಿಗದಿಪಡಿಸಲಾಗಿದೆ. ವಿಮಾನ ದರಗಳ ಈ ಹಠಾತ್ ಏರಿಕೆಗೆ ಪ್ರಯಾಣಿಕರು ತೀವ್ರ ಅಸಮಾಧಾನಕ್ಕೆ ವ್ಯಕ್ತಪಡಿಸುತ್ತಿದ್ದಾರೆ. ಅನಿವಾರ್ಯ ಕಾರಣಗಳಿಂದ ಪ್ರಯಾಣಿಸಬೇಕಾದವರು ಹೆಚ್ಚಿನ ಹಣ ಪಾವತಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More