Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಸಿಕ್ಸರ್‌ ಮೂಲಕ ಸ್ಫೋಟಕ ಅರ್ಧಶತಕ ಪೂರೈಸಿದ ರಹಾನೆ; ವಿಡಿಯೋ ನೋಡಿ

IPL 2025: ಸಿಕ್ಸರ್‌ ಮೂಲಕ ಸ್ಫೋಟಕ ಅರ್ಧಶತಕ ಪೂರೈಸಿದ ರಹಾನೆ; ವಿಡಿಯೋ ನೋಡಿ

ಪೃಥ್ವಿಶಂಕರ
|

Updated on: Mar 22, 2025 | 9:21 PM

Ajinkya Rahane's Explosive IPL 2025 Debut: ಐಪಿಎಲ್ 2025ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಅಜಿಂಕ್ಯ ರಹಾನೆ ಅವರು ಉತ್ತಮ ಆರಂಭ ಪಡೆದಿದ್ದಾರೆ. ಆರ್‌ಸಿಬಿ ವಿರುದ್ಧದ ಮೊದಲ ಪಂದ್ಯದಲ್ಲಿ ಅವರು ಕೇವಲ 31 ಎಸೆತಗಳಲ್ಲಿ 56 ರನ್ ಗಳಿಸಿ ಅರ್ಧಶತಕ ಸಾಧಿಸಿದರು. 182ರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ ರಹಾನೆ ಅವರ ಇನ್ನಿಂಗ್ಸ್​ನಲ್ಲಿ 4 ಸಿಕ್ಸರ್ ಮತ್ತು 6 ಬೌಂಡರಿಗಳು ಸೇರಿವೆ.

ಐಪಿಎಲ್ 2025 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕರಾಗಿರುವ ಅಜಿಂಕ್ಯ ರಹಾನೆ, ಈ ಸೀಸನ್​ನಲ್ಲಿ ಉತ್ತಮ ಆರಂಭವನ್ನು ಪಡೆದುಕೊಂಡಿದ್ದಾರೆ. ಆರ್​ಸಿಬಿ ವಿರುದ್ಧದ ಮೊದಲ ಪಂದ್ಯದಲ್ಲಿಯೇ ಅಬ್ಬರದ ಬ್ಯಾಟಿಂಗ್‌ ಮಾಡಿದ ರಹಾನೆ ಈ ಸೀಸನ್​ನ ಮೊದಲ ಅರ್ಧಶತಕವನ್ನು ದಾಖಲಿಸಿದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಮೊದಲ ಪಂದ್ಯದಲ್ಲಿ ರಹಾನೆ ಕೇವಲ 25 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ದೊಡ್ಡ ವಿಷಯವೆಂದರೆ ಅವರು ಇದನ್ನು ಸಿಕ್ಸರ್ ಹೊಡೆಯುವ ಮೂಲಕ ಮಾಡಿದರು. ಇಷ್ಟೇ ಅಲ್ಲ, ಅವರು ಕೇವಲ 31 ಎಸೆತಗಳಲ್ಲಿ 182 ಸ್ಟ್ರೈಕ್ ರೇಟ್‌ನಲ್ಲಿ 56 ರನ್ ಗಳಿಸುವ ಮೂಲಕ ತಮ್ಮ ಬ್ಯಾಟಿಂಗ್ ಕೌಶಲ್ಯವನ್ನು ತೋರಿಸಿದರು. ರಹಾನೆ ಅವರ ಇನ್ನಿಂಗ್ಸ್​ನಲ್ಲಿ 4 ಸಿಕ್ಸರ್‌ ಮತ್ತು 6 ಬೌಂಡರಿಗಳು ಸೇರಿದ್ದವು.