ಅಜಿತ್ ಪವಾರ್ ಅಂತ್ಯಕ್ರಿಯೆ; ಕಣ್ಣೀರಿಡುತ್ತಾ ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪುತ್ರರು ತಮ್ಮ ತಂದೆಯ ಅಂತ್ಯಕ್ರಿಯೆಯ ವಿಧಿವಿಧಾನಗಳನ್ನು ನೆರವೇರಿಸಿದರು. ಬುಧವಾರ ವಿಮಾನ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಪುಣೆಯ ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಯಿತು. ಅವರ ಪುತ್ರರಾದ ಪಾರ್ಥ್ ಮತ್ತು ಜೇ ಅವರು ಅಂತ್ಯಕ್ರಿಯೆ ನಡೆಸಿದರು.
ಪುಣೆ, ಜನವರಿ 29: ಮಹಾರಾಷ್ಟ್ರದ ಡಿಸಿಎಂ ಹಾಗೂ ಎನ್ಸಿಪಿ ನಾಯಕ ಅಜಿತ್ ಪವಾರ್ (Ajit Pawar) ಅವರ ಅಂತ್ಯಕ್ರಿಯೆ ಇಂದು ನೆರವೇರಿದೆ. ನಿನ್ನೆ ಬಾರಾಮತಿಯಲ್ಲಿ ನಡೆದ ವಿಮಾನ ದುರಂತದಲ್ಲಿ ಅವರು ಮೃತಪಟ್ಟಿದ್ದರು. ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಪುಣೆಯ ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಯಿತು. ಅವರ ಪುತ್ರರಾದ ಪಾರ್ಥ್ ಮತ್ತು ಜೇ ತಮ್ಮ ತಂದೆಯ ಅಂತ್ಯಕ್ರಿಯೆಯ ವಿಧಿ-ವಿಧಾನಗಳನ್ನು ನಡೆಸಿದರು. ಕೇಂದ್ರ ಸಚಿವ ಅಮಿತ್ ಶಾ, ನಿತಿನ್ ಗಡ್ಕರಿ, ಮಹಾರಾಷ್ಟ್ರದ ಸಿಎಂ ದೇವೇಂದ್ರ ಫಡ್ನವೀಸ್ ಸೇರಿದಂತೆ ಹಲವರು ಅಂತಿಮ ನಮನ ಸಲ್ಲಿಸಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Jan 29, 2026 04:15 PM

