Video: ಅಜಿತ್ ಪವಾರ್ ಇದ್ದ ವಿಮಾನ ಪತನಗೊಂಡ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ವಿಮಾನ ಅಪಘಾತದ ಸಿಸಿಟಿವಿ ದೃಶ್ಯಾವಳಿಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಬಾರಾಮತಿ ವಿಮಾನ ನಿಲ್ದಾಣದ ಬಳಿ ವಿಮಾನವು ಎರಡನೇ ಬಾರಿ ಲ್ಯಾಂಡಿಂಗ್ ಪ್ರಯತ್ನಿಸುತ್ತಿದ್ದಾಗ ನಿಯಂತ್ರಣ ಕಳೆದುಕೊಂಡು ನೆಲಕ್ಕೆ ಅಪ್ಪಳಿಸಿ ಬೆಂಕಿ ಹೊತ್ತಿಕೊಂಡಿದೆ. ಈ ಸ್ಫೋಟಕ ದೃಶ್ಯಗಳು ಡಿಜಿಸಿಎ ಮತ್ತು ತನಿಖಾ ಸಂಸ್ಥೆಗಳಿಗೆ ವಿಮಾನ ಪತನದ ನಿಖರ ಕಾರಣ ಪತ್ತೆಹಚ್ಚಲು ನಿರ್ಣಾಯಕವಾಗಿವೆ.
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ವಿಮಾನ ಅಪಘಾತದ ಸಿಸಿಟಿವಿ ದೃಶ್ಯಾವಳಿಗಳು ಅಥವಾ ಫೋಟೋಗಳು ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಬಾರಾಮತಿ ವಿಮಾನ ನಿಲ್ದಾಣದ ಸಮೀಪವಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯದಲ್ಲಿ ವಿಮಾನವು ರನ್‌ವೇ ಹತ್ತಿರ ಬರುತ್ತಿದ್ದಂತೆ ದಿಢೀರ್ ನೆಲಕ್ಕೆ ಅಪ್ಪಳಿಸಿ ಬೆಂಕಿ ಹೊತ್ತಿಕೊಳ್ಳುವುದನ್ನು ಈ ವಿಡಿಯೋದಲ್ಲಿ ನೋಡಬಹುದು. ವಿಮಾನವು ಎರಡನೇ ಬಾರಿ ಲ್ಯಾಂಡಿಂಗ್ ಮಾಡಲು ಪ್ರಯತ್ನಿಸುತ್ತಿದ್ದಾಗ (Second Approach) ಈ ಘಟನೆ ಸಂಭವಿಸಿದೆ. ಸಿಸಿಟಿವಿ ದೃಶ್ಯದಲ್ಲಿ ವಿಮಾನವು ನಿಯಂತ್ರಣ ಕಳೆದುಕೊಂಡು ವೇಗವಾಗಿ ಭೂಮಿಗೆ ಅಪ್ಪಳಿಸುವುದು ಮತ್ತು ನಂತರದ ಕ್ಷಣದಲ್ಲೇ ಭಾರಿ ಸ್ಫೋಟದೊಂದಿಗೆ ದಟ್ಟವಾದ ಹೊಗೆ ಏರುವುದು ದಾಖಲಾಗಿದೆ. ಈ ಸಿಸಿಟಿವಿ ದೃಶ್ಯಾವಳಿಗಳನ್ನು ಈಗ ಡಿಜಿಸಿಎ (DGCA) ಮತ್ತು ತನಿಖಾ ಸಂಸ್ಥೆಗಳು ವಿಮಾನ ಪತನದ ನಿಖರ ಕಾರಣವನ್ನು ಪತ್ತೆಹಚ್ಚಲು ಬಳಸಿಕೊಳ್ಳುತ್ತಿವೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Jan 28, 2026 01:20 PM