‘ನನ್ನ ಜೀವನದ ಸ್ಮರಣೀಯ ಅನುಭವ’: ಟಾಕ್ಸಿಕ್ ಚಿತ್ರದ ಬಗ್ಗೆ ನಟ ಅಕ್ಷಯ್ ಓಬೆರಾಯ್ ಮಾತು

Updated on: Aug 08, 2026 | 8:57 PM

ನಟ ಅಕ್ಷಯ್ ಓಬೆರಾಯ್ ಅವರು ಟಾಕ್ಸಿಕ್ ಟ್ರೈಲರ್ ಲಾಂಚ್ ಸಮಾರಂಭದಲ್ಲಿ ತಮ್ಮ ಅನುಭವ ಹಂಚಿಕೊಂಡರು. ಚಿತ್ರದ ಭಾಗವಾಗಿರುವುದನ್ನು ಗೌರವವೆಂದು ಬಣ್ಣಿಸಿದ ಅವರು, ಯಶ್ ಮತ್ತು ನಿರ್ದೇಶಕಿ ಗೀತು ಮೋಹನ್‌ದಾಸ್ ಅವರನ್ನು ಪ್ರಶಂಸಿಸಿದರು. ಇದು ಕೇವಲ ಸಿನಿಮಾವಲ್ಲ, ಬದಲಿಗೆ ತಮ್ಮ ಕಲಿಕೆಗೆ ನೆರವಾದ ಜೀವನದ ಪ್ರಯಾಣ ಎಂದು ಹೇಳಿದರು.

ಬೆಂಗಳೂರು, ಆಗಸ್ಟ್​ 08: ನಟ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿದ್ದ ಬಾಲಿವುಡ್ ನಟ ಅಕ್ಷಯ್ ಒಬೆರಾಯ್ (Akshay Oberoi), ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಈ ವೇಳೆ ಮಾತನಾಡಿದ ಅವರು, ‘ಟಾಕ್ಸಿಕ್ ಟ್ರೈಲರ್ ಅದ್ಭುತ. ಇಂತಹ ದೊಡ್ಡ ತಾರಾಗಣವಿರುವ ಪ್ರಾಜೆಕ್ಟ್‌ನ ಭಾಗವಾಗಿರುವುದು ಹೆಮ್ಮೆಯ ಸಂಗತಿ’ ಎಂದರು. ಇನ್ನು ‘ನಿರ್ದೇಶಕಿ ಗೀತು ಮೋಹನ್‌ದಾಸ್ ಅವರ ಕಾರ್ಯವೈಖರಿ ಮತ್ತು ನಟ ಯಶ್ ಅವರ ನಟನಾ ಶಕ್ತಿಯಿಂದ ತಮಗೆ ವೈಯಕ್ತಿಕವಾಗಿ ಹಾಗೂ ವೃತ್ತಿಜೀವನದಲ್ಲಿ ಸಾಕಷ್ಟು ಕಲಿಯಲು ಸಿಕ್ಕಿದೆ. ಈ ಚಿತ್ರದಲ್ಲಿ ನಟಿಸಿರುವುದು ನನ್ನ ಜೀವನದ ಅತ್ಯಂತ ಸ್ಮರಣೀಯ ಅನುಭವಗಳಲ್ಲಿ ಒಂದು’ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ಸಿನಿಮಾ ವಿಡಿಯೋಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More