Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ, ನೇರಪ್ರಸಾರ
ಖಾಲಿ ಇರುವ 2.75 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಆರ್. ಅಶೋಕ್ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದು, ಶ್ರೀನಗರ ವೃತ್ತದಿಂದ ಮಿಚಿಗನ್ ಕಾಂಪೌಂಡ್ ವರೆಗೆ ಮೆರವಣಿಗೆ ನಡೆಯಲಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರದಲ್ಲಿ 1,500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಪ್ರತಿಭಟನೆಯ ನೇರ ಪ್ರಸಾರ ಇಲ್ಲಿದೆ.
ಧಾರವಾಡ, ಫೆಬ್ರವರಿ 24: ಧಾರವಾಡದಲ್ಲಿ ಖಾಲಿ ಇರುವ 2.75 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ (AKSSA) ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಪ್ರತಿಪಕ್ಷ ಬಿಜೆಪಿ ಸಹ ಪ್ರತಿಭಟನೆ ನಡೆಸುತ್ತಿದೆ. ಶಿಕ್ಷಣ, ಪೊಲೀಸ್, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಹುದ್ದೆಗಳನ್ನು ಭರ್ತಿ ಮಾಡುವಂತೆ ಪಕ್ಷವು ಒತ್ತಾಯಿಸಲಾಗಿದೆ.
ಪ್ರತಿಭಟನೆಯು ಧಾರವಾಡದ ಶ್ರೀನಗರ ವೃತ್ತದಿಂದ ಆರಂಭವಾಗಿ ಮಿಚಿಗನ್ ಕಾಂಪೌಂಡ್‌ನಲ್ಲಿ ಸಭೆಯೊಂದಿಗೆ ಅಂತ್ಯಗೊಳ್ಳಲಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಉಪನಾಯಕ ಅರವಿಂದ ಬೆಲ್ಲದ್ ಮತ್ತು ಛಲುವಾದಿ ನಾರಾಯಣಸ್ವಾಮಿ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ. ಪ್ರತಿಭಟನೆಯ ನೇರ ಪ್ರಸಾರ ಇಲ್ಲಿದೆ.
Published on: Feb 24, 2026 11:13 AM
Latest Videos
ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ಅಶೋಕ್ ಸ್ಫೋಟಕ ಆರೋಪ
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್ ಪ್ರತಿಭಟನೆ
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ಎಡವಟ್ಟು?
ಮನೆಯಲ್ಲಿ ಅಗ್ನಿ ಅವಘಡ, ಅವಳಿ ಶಿಶುಗಳು ಸೇರಿ ಆರು ಮಂದಿ ಸಜೀವದಹನ

