ತಾಯಿ ಆಸ್ಪತ್ರೆಯಲ್ಲಿದ್ದರೂ ಆ್ಯಂಕರಿಂಗ್​​ಗೆ ಮಾಡಿದ ಅಕುಲ್ ಬಾಲಾಜಿ; ಸ್ಟೇಜ್ ಮೇಲೆ ಕಣ್ಣೀರು

Updated on: Oct 17, 2025 | 3:37 PM

Akul Balaji: ಅದ್ದೂರಿಯಾಗಿ ಜೀ ಕುಟುಂಬ ಅವಾರ್ಡ್ಸ್ ಕಾರ್ಯಕ್ರಮ ನಡೆದಿದೆ. ಈ ಅವಾರ್ಡ್ ಫಂಕ್ಷನ್​ನಲ್ಲಿ ಅಕುಲ್ ಬಾಲಾಜಿ ಹಾಗೂ ಅನುಶ್ರೀ ಅವರು ಆ್ಯಂಕರಿಂಗ್ ಮಾಡಿದ್ದಾರೆ. ಅವರು ಸ್ಟೇಜ್ ಮೇಲೆ ಕಣ್ಣೀರು ಹಾಕಿದ್ದಾರೆ. ಇದಕ್ಕೆ ಕಾರಣ ಏನು? ಆ ಬಗ್ಗೆ ಇಲ್ಲಿದೆ ವಿವರ.

ಅಕುಲ್ ಬಾಲಾಜಿ ಅವರು ಆ್ಯಂಕರಿಂಗ್ ಮೂಲಕ ಗಮನ ಸೆಳೆದಿದ್ದಾರೆ. ಪರ ರಾಜ್ಯದವರಾದರೂ ಇಲ್ಲಿ ಬಂದು ಕನ್ನಡ ಕಲಿತಿದ್ದಾರೆ. ಅವರ ಬಗ್ಗೆ ಅನೇಕರಿಗೆ ಹೆಮ್ಮೆ ಇದೆ. ಈಗ ಅಕುಲ್ ಬಾಲಾಜಿ ಹಾಗೂ ಅನುಶ್ರೀ ಒಟ್ಟಾಗಿ ಜೀ ಕನ್ನಡದ ‘ಜೀ ಕನ್ನಡ ಕುಟುಂಬ ಅವಾರ್ಡ್ಸ್’ ನಡೆಸಿಕೊಟ್ಟರು. ಈ ವೇಳೆ ‘ಅತ್ಯುತ್ತಮ ತಾಯಿ’ ಅವಾರ್ಡ್ ನೀಡುವಾಗ ಅಕುಲ್ ಕಣ್ಣೀರು ಹಾಕಿದರು. ಏಕೆಂದರೆ ಆ ಸಂದರ್ಭದಲ್ಲಿ ಅವರ ತಾಯಿ ಆಸ್ಪತ್ರೆಯಲ್ಲಿ ಇದ್ದರಂತೆ. ಆ ಸಂದರ್ಭದ ವಿಡಿಯೋ ಮೇಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Published on: Oct 17, 2025 03:36 PM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More