ಕಳೆದ ವರ್ಷದಂತೆ ಈ ವರ್ಷವೂ ಹಾಸನಾಂಬೆಯ ದರ್ಶನ ಮಾಡಿಕೊಂಡಿರುವೆ: ಪ್ರತಾಪ್ ಸಿಂಹ

ಅರುಣ್​ ಕುಮಾರ್​ ಬೆಳ್ಳಿ

Updated on: Oct 28, 2024 | 10:24 AM

ವಿಧಾನಸಭೆಗಾಗಿ ನಡೆಯುತ್ತಿರುವ ಎಲ್ಲ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಎನ್​ಡಿಎ ಅಭ್ಯರ್ಥಿಗಳು ಗೆಲ್ಲಲಿದ್ದಾರೆ, ದೇಶದೆಲ್ಲೆಡೆ ಬಿಜೆಪಿಗೆ ಒಳ್ಳೆಯ ವಾತಾವರಣವಿದೆ ಮತ್ತು ತಾನು ಮೂರು ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ಮಾಡಲು ತೆರಳುವುದಾಗಿ ಪ್ರತಾಪ್ ಸಿಂಹ ಹೇಳಿದರು.

ಹಾಸನ: ಹಾಸನಾಂಬೆಯ ದರ್ಶನ ಮಾಡಿಕೊಂಡ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ, ಕಳೆದ ವರ್ಷ ತಾಯಿಯ ದರ್ಶನಕ್ಕೆ ಅಗಮಿಸಿದಂತೆ ಈ ವರ್ಷವೂ ದರ್ಶನ ಮಾಡಿಕೊಂಡಿರುವುದಾಗಿ ಹೇಳಿದರು. ಹಾಸನಾಂಬೆಯ ದರ್ಶನಕ್ಕೆ ಪ್ರತಿವರ್ಷ ಲಕ್ಷಾಂತರ ಜನ ಬರುತ್ತಾರೆ. ಧರ್ಮನಿಷ್ಠರನ್ನು ತಾಯಿ ಆಶೀರ್ವದಿಸಿ ಕಾಪಾಡಲಿ ಎಂದು ಬೇಡಿಕೊಂಡಿರುವುದಾಗಿ ಇತ್ತೀಚಿಗೆ ಅಪರೂಕ್ಕೊಮ್ಮೆ ಮಾಧ್ಯಮಗಳ ಕಣ್ಣಿಗೆ ಬೀಳುವ ಪ್ರತಾಪ್ ಸಿಂಹ ಹೇಳಿದರು.ಮತ್ತಷ್ಟು

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ಕೈ ಬಿಟ್ಟ ಬಿಜೆಪಿ: ಪ್ರತಾಪ್ ಸಿಂಹ ಹೇಳಿದ್ದಿಷ್ಟು

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.