ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್

Updated on: Jul 02, 2026 | 8:01 PM

ರುದ್ರಪ್ರಯಾಗ ಜಿಲ್ಲೆಯಲ್ಲಿ ಮುಂದುವರಿದಿರುವ ಭಾರಿ ಮಳೆಯು ನದಿಗಳ ನೀರಿನ ಮಟ್ಟದ ಮೇಲೆ ತೀವ್ರ ಪರಿಣಾಮ ಬೀರಲು ಪ್ರಾರಂಭಿಸಿದೆ. ಈ ಜಿಲ್ಲೆಯ ಪ್ರಮುಖ ನದಿಗಳಾದ ಅಲಕನಂದಾ ಮತ್ತು ಮಂದಾಕಿನಿ ಎರಡರಲ್ಲೂ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದ್ದು, ಜಿಲ್ಲಾಡಳಿತವು ಕಣ್ಗಾವಲನ್ನು ತೀವ್ರಗೊಳಿಸಿದೆ. ಮುಂದಿನ ಕೆಲವು ದಿನಗಳ ಕಾಲ ಮಳೆ ಹೀಗೆಯೇ ಮುಂದುವರಿದರೆ, ಎರಡೂ ನದಿಗಳಲ್ಲಿ ನೀರಿನ ಮಟ್ಟ ಮತ್ತಷ್ಟು ಹೆಚ್ಚಾಗಲಿದ್ದು, ಅಪಾಯದ ಮಟ್ಟವನ್ನು ತಲುಪಬಹುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

ರುದ್ರಪ್ರಯಾಗ, ಜುಲೈ 2: ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯಲ್ಲಿ ಮುಂದುವರಿದಿರುವ ಭಾರಿ ಮಳೆಯು (Rain Updates) ನದಿಗಳ ನೀರಿನ ಮಟ್ಟದ ಮೇಲೆ ತೀವ್ರ ಪರಿಣಾಮ ಬೀರಲು ಪ್ರಾರಂಭಿಸಿದೆ. ಈ ಜಿಲ್ಲೆಯ ಪ್ರಮುಖ ನದಿಗಳಾದ ಅಲಕನಂದಾ ಮತ್ತು ಮಂದಾಕಿನಿ ಎರಡರಲ್ಲೂ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದ್ದು, ಜಿಲ್ಲಾಡಳಿತವು ಕಣ್ಗಾವಲನ್ನು ತೀವ್ರಗೊಳಿಸಿದೆ. ಮುಂದಿನ ಕೆಲವು ದಿನಗಳ ಕಾಲ ಮಳೆ ಹೀಗೆಯೇ ಮುಂದುವರಿದರೆ, ಎರಡೂ ನದಿಗಳಲ್ಲಿ ನೀರಿನ ಮಟ್ಟ ಮತ್ತಷ್ಟು ಹೆಚ್ಚಾಗಲಿದ್ದು, ಅಪಾಯದ ಮಟ್ಟವನ್ನು ತಲುಪಬಹುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

ನದಿತೀರದಲ್ಲಿ ವಾಸಿಸುವ ನಿವಾಸಿಗಳು ಮತ್ತು ತೀರ್ಥಯಾತ್ರೆಗೆ ಬಂದಿರುವ ಭಕ್ತಾದಿಗಳು ತೀವ್ರ ಜಾಗರೂಕರಾಗಿರಬೇಕು. ಅಗತ್ಯವಿದ್ದರೆ ಮಾತ್ರ ನದಿತೀರಗಳಿಗೆ ಅಥವಾ ಇತರೆ ಅಪಾಯಕಾರಿ ಪ್ರದೇಶಗಳಿಗೆ ಭೇಟಿ ನೀಡಬೇಕು ಎಂದು ಆಡಳಿತ ಮಂಡಳಿ ಮನವಿ ಮಾಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us