ಕೋಲಾರದಲ್ಲಿ ಅನುಮಾನಾಸ್ಪದ ಸೂಟ್​ಕೇಸ್​ ಪತ್ತೆ, ವಿಚಿತ್ರವಾದ ಶಬ್ದದಿಂದ ಸ್ಥಳೀಯರಲ್ಲಿ ಆತಂಕ

ಕೋಲಾರ ಹೊರವಲಯದ ಟಮಕ ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಸೂಟ್​ಕೇಸ್ ಪತ್ತೆಯಾಗಿದೆ. ಸೂಟ್​ಕೇಸ್​ನಿಂದ ಬರುತ್ತಿದ್ದ ಶಬ್ದ ಕೇಳಿದ ಸ್ಥಳೀಯರು ಆತಂಕಗೊಂಡು ಪೊಲೀಸರಿಗೆ ಮಾಹತಿ ನೀಡಿದ್ದಾರೆ. ಕೂಡಲೆ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿದೆ.

ಕೋಲಾರದಲ್ಲಿ ಅನುಮಾನಾಸ್ಪದ ಸೂಟ್​ಕೇಸ್​ ಪತ್ತೆ, ವಿಚಿತ್ರವಾದ ಶಬ್ದದಿಂದ ಸ್ಥಳೀಯರಲ್ಲಿ ಆತಂಕ
| Updated By: ವಿವೇಕ ಬಿರಾದಾರ

Updated on:Sep 25, 2024 | 12:23 PM

ಕೋಲಾರ, ಸೆಪ್ಟೆಂಬರ್​​ 25: ಕೋಲಾರ (Kolar) ಹೊರವಲಯದ ಟಮಕ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಪತ್ತೆಯಾಗಿದ್ದ ಸೂಟ್​ಕೇಸ್ (Suitcase) ಕೆಲ ಹೊತ್ತು ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಸೂಟ್​ಕೇಸ್​ನಿಂದ ಅಲಾರಾಂ ರೀತಿಯ ಶಬ್ದ ಬರುತ್ತಿದ್ದ ಹಿನ್ನೆಲೆಯಲ್ಲಿ ಬಾಂಬ್​ ಇರಬಹುದು ಎಂದು ಹೆದರಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ವಿಚಾರ ತಿಳಿಯುತ್ತಿದ್ದಂತೆ ಗಲ್​ಪೇಟೆ ಠಾಣೆ ಪೊಲೀಸರು, ಎಸ್​ಪಿ ನಿಖಿಲ್​, ಹೆಚ್ಚುವರಿ ಎಸ್​ಪಿ ರವಿಶಂಕರ್ ಸ್ಥಳಕ್ಕೆ ಭೇಟಿ ನೀಡಿದರು. ನಂತರ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದರು.

ಬಳಿಕ, ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸಿದಾಗ, ಅದು ಕ್ರೌನ್​ ಕಂಪನಿಯ ಸೂಟ್​​ಕೇಸ್​​​ ಎಂದು ತಿಳಿಯಿತು. ಸೆನ್ಸಾರ್​ ಸೂಟ್​ಕೇಸ್ ಆಗಿದ್ದು, ಯಾರೋ ಲಾಕರ್​ ಪಾಸ್ವರ್ಡ್​ ಅನ್ನು ತಪ್ಪಾಗಿ ​ಹಾಕಿದ್ದರಿಂದ ಶಬ್ದ ಬಂದಿದೆ ಎಂದು ಮಾಹಿತಿ ನೀಡಿದರು.

ಸೂಟ್ ಕೇಸ್ ತೆರೆಯಲು ಬೆಂಗಳೂರಿನಿಂದ ಬಾಂಬ್ ತಜ್ಞರ ತಂಡ ಕೋಲಾರಕ್ಕೆ ತೆರಳುತ್ತಿದೆ. ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ರಾಷ್ಟ್ರೀಯ ಹೆದ್ದಾರಿ-75 ರ ಸರ್ವೀಸ್ ರಸ್ತೆ ಬಂದ್ ಮಾಡಲಾಗಿದೆ. ಬಾಂಬ್ ಆತಂಕ ಮೂಡಿಸಿರುವ ಸೂಟ್ ಕೇಸ್ ನೋಡಲು ಜನ ಜಮಾಯಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:38 am, Wed, 25 September 24

Follow us
ಯುವ ದಸರಾ ವೇದಿಕೆ ಮೇಲೆ ನಕ್ಕ ರುಕ್ಮಿಣಿ ವಸಂತ್; ವಿಡಿಯೋ ನೋಡಿ
ಯುವ ದಸರಾ ವೇದಿಕೆ ಮೇಲೆ ನಕ್ಕ ರುಕ್ಮಿಣಿ ವಸಂತ್; ವಿಡಿಯೋ ನೋಡಿ
Daily Devotional: ಯಾವ ಗ್ರಹ ಪೂಜಿಸಿದರೆ ಏನೇನು ಫಲ ಸಿಗುತ್ತೆ?
Daily Devotional: ಯಾವ ಗ್ರಹ ಪೂಜಿಸಿದರೆ ಏನೇನು ಫಲ ಸಿಗುತ್ತೆ?
Nithya Bhavishya: ಈ ರಾಶಿಯ ಮಹಿಳೆಯರು ಇಂದು ಉದ್ಯಮದಲ್ಲಿ ಪ್ರಗತಿ ಕಾಣುವರು
Nithya Bhavishya: ಈ ರಾಶಿಯ ಮಹಿಳೆಯರು ಇಂದು ಉದ್ಯಮದಲ್ಲಿ ಪ್ರಗತಿ ಕಾಣುವರು
ರಸ್ತೆಯಲ್ಲಿ ಬಿದ್ದ ಮೀನುಗಳನ್ನು ಕವರ್​ನಲ್ಲಿ ತುಂಬಿಕೊಳ್ಳಲು ಮುಗಿಬಿದ್ದ ಜನ
ರಸ್ತೆಯಲ್ಲಿ ಬಿದ್ದ ಮೀನುಗಳನ್ನು ಕವರ್​ನಲ್ಲಿ ತುಂಬಿಕೊಳ್ಳಲು ಮುಗಿಬಿದ್ದ ಜನ
ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್
ನಾನಿನ್ನೂ ಮಾತು ನಿಲ್ಲಿಸಿಲ್ಲ..ಸಡನ್ ಸಿಟ್ಟಾದ ಸಿದ್ರಾಮಯ್ಯ ನೋಡಿ DCM ಶಾಕ್​
ನಾನಿನ್ನೂ ಮಾತು ನಿಲ್ಲಿಸಿಲ್ಲ..ಸಡನ್ ಸಿಟ್ಟಾದ ಸಿದ್ರಾಮಯ್ಯ ನೋಡಿ DCM ಶಾಕ್​
ಜಾಮೀನಿಗೆ ಹೈಕೋರ್ಟ್​ನಲ್ಲಿ ದರ್ಶನ್ ಅರ್ಜಿ ಹಾಕೋದು ಯಾವಾಗ? ವಿವರಿಸಿದ ಲಾಯರ್
ಜಾಮೀನಿಗೆ ಹೈಕೋರ್ಟ್​ನಲ್ಲಿ ದರ್ಶನ್ ಅರ್ಜಿ ಹಾಕೋದು ಯಾವಾಗ? ವಿವರಿಸಿದ ಲಾಯರ್
‘ಪಾಠ ಕಲಿಯಿರಿ’: ಪ್ರಕಾಶ್ ರೈ ವಿರುದ್ಧ ಪವನ್ ಕಲ್ಯಾಣ್ ತೀವ್ರ ಆಕ್ರೋಶ
‘ಪಾಠ ಕಲಿಯಿರಿ’: ಪ್ರಕಾಶ್ ರೈ ವಿರುದ್ಧ ಪವನ್ ಕಲ್ಯಾಣ್ ತೀವ್ರ ಆಕ್ರೋಶ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ