ಕೋಲಾರದಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾದ ಸೂಟ್​ಕೇಸ್​ನ್ನು ಸ್ಫೋಟಿಸಿದ ಬಾಂಬ್ ನಿಷ್ಕ್ರಿಯ ದಳ

Edited By: ವಿವೇಕ ಬಿರಾದಾರ

Updated on: Sep 25, 2024 | 1:22 PM

ಕೋಲಾರ ಹೊರವಲಯದ ಟಮಕ ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಸೂಟ್​ಕೇಸ್ ಪತ್ತೆಯಾಗಿದೆ. ಸೂಟ್​ಕೇಸ್​ನಿಂದ ಬರುತ್ತಿದ್ದ ಶಬ್ದ ಕೇಳಿದ ಸ್ಥಳೀಯರು ಆತಂಕಗೊಂಡು ಪೊಲೀಸರಿಗೆ ಮಾಹತಿ ನೀಡಿದ್ದಾರೆ. ಕೂಡಲೆ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿದೆ.

ಕೋಲಾರ, ಸೆಪ್ಟೆಂಬರ್​​ 25: ಕೋಲಾರ (Kolar) ಹೊರವಲಯದ ಟಮಕ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಪತ್ತೆಯಾಗಿದ್ದ ಸೂಟ್​ಕೇಸ್ (Suitcase) ಕೆಲ ಹೊತ್ತು ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಸೂಟ್​ಕೇಸ್​ನಿಂದ ಅಲಾರಾಂ ರೀತಿಯ ಶಬ್ದ ಬರುತ್ತಿದ್ದ ಹಿನ್ನೆಲೆಯಲ್ಲಿ ಬಾಂಬ್​ ಇರಬಹುದು ಎಂದು ಹೆದರಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ವಿಚಾರ ತಿಳಿಯುತ್ತಿದ್ದಂತೆ ಗಲ್​ಪೇಟೆ ಠಾಣೆ ಪೊಲೀಸರು, ಎಸ್​ಪಿ ನಿಖಿಲ್​, ಹೆಚ್ಚುವರಿ ಎಸ್​ಪಿ ರವಿಶಂಕರ್ ಸ್ಥಳಕ್ಕೆ ಭೇಟಿ ನೀಡಿದರು. ನಂತರ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದರು.

ಬಳಿಕ, ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸಿದಾಗ, ಅದು ಕ್ರೌನ್​ ಕಂಪನಿಯ ಸೂಟ್​​ಕೇಸ್​​​ ಎಂದು ತಿಳಿಯಿತು. ಸೆನ್ಸಾರ್​ ಸೂಟ್​ಕೇಸ್ ಆಗಿದ್ದು, ಯಾರೋ ಲಾಕರ್​ ಪಾಸ್ವರ್ಡ್​ ಅನ್ನು ತಪ್ಪಾಗಿ ​ಹಾಕಿದ್ದರಿಂದ ಶಬ್ದ ಬಂದಿದೆ ಎಂದು ಮಾಹಿತಿ ನೀಡಿದರು. ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ರಾಷ್ಟ್ರೀಯ ಹೆದ್ದಾರಿ-75 ರ ಸರ್ವೀಸ್ ರಸ್ತೆ ಬಂದ್ ಮಾಡಲಾಗಿದೆ. ಬಾಂಬ್ ಆತಂಕ ಮೂಡಿಸಿರುವ ಸೂಟ್ ಕೇಸ್ ನೋಡಲು ಜನ ಜಮಾಯಿಸುತ್ತಿದ್ದಾರೆ.

ಸೂಟ್ ಕೇಸ್ ತೆರೆಯಲು ಬೆಂಗಳೂರಿನಿಂದ ಬಾಂಬ್ ತಜ್ಞರ ತಂಡ ಕೋಲಾರಕ್ಕೆ ತೆರಳಿದೆ. ಸೂಟ್ ಕೇಸ್​ ಅನ್ನು ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಡಿಟೋನೇಟರ್ ಬಳಸಿ ಬ್ಲಾಸ್ಟ್ ಮಾಡಿದೆ. ಸೂಟ್ ಕೇಸ್​ನಲ್ಲಿ ಏನೂ ಇರಲಿಲ್ಲ, ಖಾಲಿಯಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published on: Sep 25, 2024 10:38 AM
Loading...
Unable to load recommendations.
Follow Us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More