Karwar Rain: ಕಾರವಾರದಲ್ಲಿ ಭಾರೀ ಮಳೆ, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

Karwar Rain: ಕಾರವಾರದಲ್ಲಿ ಭಾರೀ ಮಳೆ, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

ಆಯೇಷಾ ಬಾನು
|

Updated on: Jun 24, 2023 | 10:09 AM

ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಮಳೆಯ ಅಬ್ಬರ ಜೋರಾಗಿದೆ. ಭಟ್ಕಳ, ಅಂಕೋಲ, ಜೋಯಿಡಾ, ಕಾರವಾರ ಭಾಗದಲ್ಲಿ ಭಾರೀ ಮಳೆಯಾಗಿದೆ. ಕಡಲು ಪ್ರಕ್ಷುಬ್ಧ ಸಾಧ್ಯತೆ ಹಿನ್ನಲೆ ಸಮುದ್ರ ತೀರಕ್ಕೆ ಮೀನುಗಾರರು, ಪ್ರವಾಸಿಗರು ತೆರಳದಂತೆ ನಿಷೇಧ ಹೇರಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲೂ ಕೂಡ ತುಂತುರು ಮಳೆಯಾಗುತ್ತಿದೆ. ಚಿಕ್ಕಮಗಳೂರು ನಗರ ಸೇರಿದಂತೆ ಮೂಡಿಗೆರೆ ,ಕಳಸ, ಶೃಂಗೇರಿ, ಕೊಪ್ಪ, ಎನ್.ಅರ್ ಪುರ ತಾಲೂಕಿನಲ್ಲಿ ತುಂತುರು ಮಳೆಯಾಗುತ್ತಿದೆ.