ತಮಿಳುನಾಡು: ಊಟಿ ಪ್ರವಾಸಕ್ಕೆ ಪ್ಲಾನ್ ಮಾಡಿದ್ದೀರಾ? ಆದರೆ ತಕ್ಷಣ ರದ್ದು ಮಾಡಿ, ಏಕೆಂದರೆ..

ಚೆನ್ನೈ, ಕನ್ಯಾಕುಮಾರಿ ಮತ್ತು ಕಡಲೂರು ಸೇರಿದಂತೆ ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಮತ್ತು ನೀಲಗಿರಿಯಲ್ಲಿ ಭೂಕುಸಿತವಾಗಿದೆ. ತಮಿಳುನಾಡಿನ ಅನೇಕ ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಅಂದರೆ ನವೆಂಬರ್ 8 ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಮಿಳುನಾಡು: ಊಟಿ ಪ್ರವಾಸಕ್ಕೆ ಪ್ಲಾನ್ ಮಾಡಿದ್ದೀರಾ? ಆದರೆ ತಕ್ಷಣ ರದ್ದು ಮಾಡಿ, ಏಕೆಂದರೆ..
|

Updated on:Nov 06, 2023 | 2:32 PM

ಭಾರೀ ಮಳೆಗೆ ತಮಿಳುನಾಡು ತತ್ತರಿಸಿದೆ. ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಮಳೆಯಿಂದಾಗಿ ತಮಿಳುನಾಡಿನ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಚೆನ್ನೈ, ಕನ್ಯಾಕುಮಾರಿ ಮತ್ತು ಕಡಲೂರು ಸೇರಿದಂತೆ ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಮತ್ತು ನೀಲಗಿರಿಯಲ್ಲಿ ಭೂಕುಸಿತವಾಗಿದೆ. ಇದರಿಂದಾಗಿ ಊಟಿಗೆ ತೆರಳುವ ವಾಹನಗಳು ಮತ್ತು ರೈಲುಗಳನ್ನು (Tourist) ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ (Heavy rains in Ooty).

ಭೂಕುಸಿತದಿಂದಾಗಿ ಬೃಹತ್ ಬಂಡೆಗಳು ಹಳಿಗಳ ಮೇಲೆ ಬಿದ್ದಿವೆ. ಇವುಗಳನ್ನು ಸಿಬ್ಬಂದಿ ತೆರವುಗೊಳಿಸುತ್ತಿದ್ದಾರೆ. ಥೇಣಿ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ನದಿಗಳು ತುಂಬಿ ಹರಿಯುತ್ತಿವೆ. ಹಲವು ಗ್ರಾಮಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಭಾರೀ ಮಳೆಯಿಂದಾಗಿ ದಕ್ಷಿಣ ತಮಿಳುನಾಡಿನಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಮುಂದಿನ ಮೂರು ದಿನಗಳ ಕಾಲ ತಮಿಳುನಾಡಿನ ಪಾಂಡಿಚೇರಿ ಮತ್ತು ಕಾರೈಕ್ಕಲ್‌ನ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚೆನ್ನೈ ಪ್ರಾದೇಶಿಕ ಹವಾಮಾನ ಇಲಾಖೆ ವರದಿ ಪ್ರಕಾರ, ಕನ್ಯಾಕುಮಾರಿ, ತಿರುನಲ್ವೇಲಿ, ತೆಂಕಶಿ, ಥೇಣಿ, ದಿಂಡಿಗಲ್, ವಿರುದುನಗರ, ಮಧುರೈ, ಶಿವಗಂಗಾ, ಪುದುಕೊಟ್ಟೈ, ತಿರುಪ್ಪೂರ್, ಕೊಯಮತ್ತೂರು, ನೀಲಗಿರಿ, ಈರೋಡ್, ಕೃಷ್ಣಗಿರಿ, ಧರ್ಮಪುರಿ, ತೂತುಕುಡಿ ಮತ್ತು ರಾಮನಾಥಪುರಂನ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ತಮಿಳುನಾಡಿನ ಅನೇಕ ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಅಂದರೆ ನವೆಂಬರ್ 8 ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Published On - 2:29 pm, Mon, 6 November 23

Follow us