ಟಿವಿ9 ಜತೆ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ಬಗ್ಗೆ ಮಾತನಾಡಿದ ಆಲಿಯಾ ಭಟ್; ಇಲ್ಲಿದೆ ವಿಡಿಯೋ
ಮುಂಬೈನ ಕಾಮಾಟಿಪುರದ ಡಾನ್ ಆಗಿ ಮೆರೆದ ಗಂಗೂಬಾಯಿ ಜೀವನದ ವಿವರಗಳನ್ನು ಆಧರಿಸಿ ಈ ಸಿನಿಮಾ ನಿರ್ಮಾಣ ಆಗಿದೆ. ಆಲಿಯಾ ಜೊತೆ ವಿಜಯ್ ರಾಝ್, ಹುಮಾ ಖುರೇಶಿ ಮತ್ತು ಅಜಯ್ ದೇವಗನ್ ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ.
ಸಂಜಯ್ ಲೀಲಾ ಬನ್ಸಾಲಿ (Sanjay Leela Bhansali) ನಿರ್ದೇಶನದ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ (Gangubai Kathiawadi) ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ. ಈ ಸಿನಿಮಾದಲ್ಲಿ ಗಂಗೂಬಾಯಿ ಆಗಿ ಆಲಿಯಾ ಭಟ್ (Alia Bhatt) ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ಚಿತ್ರದ ಟ್ರೇಲರ್ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಆಲಿಯಾ ಭಟ್ ಅವರ ನಟನೆ ಕಂಡು ಎಲ್ಲರೂ ಪ್ರಶಂಸೆಯ ಮಾತುಗಳನ್ನು ಆಡುತ್ತಿದ್ದಾರೆ. ಈ ಚಿತ್ರ ಫೆಬ್ರವರಿ 25ರಂದು ವಿಶ್ವಾದ್ಯಂತ ತೆರೆಗೆ ಬರುತ್ತಿದೆ. ಕೊವಿಡ್ ಕಾರಣದಿಂದ ಸಿನಿಮಾ ರಿಲೀಸ್ ದಿನಾಂಕ ವಿಳಂಬವಾಗುತ್ತಲೇ ಇತ್ತು. ಕೊನೆಗೂ ಸಿನಿಮಾ ತೆರೆಗೆ ಬರುತ್ತಿದೆ. ಮುಂಬೈನ ಕಾಮಾಟಿಪುರದ ಡಾನ್ ಆಗಿ ಮೆರೆದ ಗಂಗೂಬಾಯಿ ಜೀವನದ ವಿವರಗಳನ್ನು ಆಧರಿಸಿ ಈ ಸಿನಿಮಾ ನಿರ್ಮಾಣ ಆಗಿದೆ. ಆಲಿಯಾ ಜೊತೆ ವಿಜಯ್ ರಾಝ್, ಹುಮಾ ಖುರೇಶಿ ಮತ್ತು ಅಜಯ್ ದೇವಗನ್ ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟ್ರೇಲರ್ ಗಮನ ಸೆಳೆದಿದೆ. ಈವರೆಗೂ 5 ಕೋಟಿಗೂ ಹೆಚ್ಚು ಬಾರಿ ಈ ಟ್ರೇಲರ್ ವೀಕ್ಷಣೆ ಕಂಡಿದೆ. ಈ ಚಿತ್ರದಲ್ಲಿ ಯಾವೆಲ್ಲ ಅಂಶ ಇದೆ? ಈ ಸಿನಿಮಾವನ್ನು ಅವರು ಒಪ್ಪಿಕೊಂಡಿದ್ದೇಕೆ? ಅವರ ಪಾತ್ರ ಹೇಗಿದೆ ಎಂಬ ಬಗ್ಗೆ ಆಲಿಯಾ ಭಟ್ ಟಿವಿ9 ಜತೆಗೆ ಮಾತನಾಡಿದ್ದಾರೆ. ಆ ವಿಡಿಯೋ ಇಲ್ಲಿದೆ.
ಇದನ್ನೂ ಓದಿ: ನೆಹರುಗೆ ಸಂಬಂಧಿಸಿದ ಎರಡು ದೃಶ್ಯಗಳಿಗೆ ಸೆನ್ಸಾರ್ ಕತ್ತರಿ; ‘ಗಂಗೂಬಾಯಿ..’ ಚಿತ್ರಕ್ಕೆ ಸಿಕ್ಕ ಪ್ರಮಾಣ ಪತ್ರ ಯಾವುದು?
Alia Bhatt: ಮಾನಸಿಕವಾಗಿ ರಣಬೀರ್ ಜತೆ ನನ್ನ ಮದುವೆ ಆಗಿದೆ ಎಂದ ಆಲಿಯಾ ಭಟ್