AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಹಲ್ಗಾಮ್​​ನಲ್ಲಿ 26 ಜನರನ್ನು ಕೊಂದ ಮೂವರು ಉಗ್ರರ ಹತ್ಯೆ; ಸಂಸತ್​​ನಲ್ಲಿ ಅಮಿತ್ ಶಾ ಘೋಷಣೆ

ಪಹಲ್ಗಾಮ್​​ನಲ್ಲಿ 26 ಜನರನ್ನು ಕೊಂದ ಮೂವರು ಉಗ್ರರ ಹತ್ಯೆ; ಸಂಸತ್​​ನಲ್ಲಿ ಅಮಿತ್ ಶಾ ಘೋಷಣೆ

ಸುಷ್ಮಾ ಚಕ್ರೆ
|

Updated on:Jul 29, 2025 | 12:47 PM

Share

ಗೃಹ ಸಚಿವ ಅಮಿತ್ ಶಾ ಮಂಗಳವಾರ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್ ಚರ್ಚೆಯ ಸಂದರ್ಭದಲ್ಲಿ ಒಂದು ದೊಡ್ಡ ಘೋಷಣೆ ಮಾಡಿದ್ದಾರೆ. ಏಪ್ರಿಲ್‌ನಲ್ಲಿ ಪಹಲ್ಗಾಮ್ ದಾಳಿಯಲ್ಲಿ 26 ಜನರನ್ನು ಕೊಂದ ಮೂವರು ಪಾಕಿಸ್ತಾನಿ ಭಯೋತ್ಪಾದಕರನ್ನು ಜುಲೈ 28ರಂದು ಆಪರೇಷನ್ ಮಹಾದೇವ್‌ನಲ್ಲಿ ಎನ್​ಕೌಂಟರ್ ಮಾಡಲಾಗಿದೆ ಎಂದು ಘೋಷಿಸಿದ್ದಾರೆ.

ನವದೆಹಲಿ, ಜುಲೈ 29: ಇಂದು ಲೋಕಸಭಾ ಅಧಿವೇಶನದಲ್ಲಿ (Lok Sabha Session) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ಪಹಲ್ಗಾಮ್ ದಾಳಿಗೆ ಕಾರಣರಾಗಿದ್ದ ಮೂವರು ಉಗ್ರರನ್ನು ಆಪರೇಷನ್ ಮಹಾದೇವ ಕಾರ್ಯಾಚರಣೆಯಲ್ಲಿ ಎನ್​ಕೌಂಟರ್ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದ ದಿನವೇ ಅಂದರೆ ಏಪ್ರಿಲ್ 22ರಂದು ಆಪರೇಷನ್ ಮಹಾದೇವ್ ಅನ್ನು ಪ್ರಾರಂಭಿಸಲಾಯಿತು ಎಂದು ಅಮಿತ್ ಶಾ ಲೋಕಸಭೆಯಲ್ಲಿ ಹೇಳಿದ್ದಾರೆ. ಅದೇ ದಿನ ಸಂಜೆ ನಾನು ಶ್ರೀನಗರ ತಲುಪಿದೆ. ಆ ಸಂಜೆ ಉನ್ನತ ಮಟ್ಟದ ಭದ್ರತಾ ಸಭೆ ನಡೆಸಲಾಯಿತು. ಅಲ್ಲಿ ಭಯೋತ್ಪಾದಕರು ದೇಶ ಬಿಟ್ಟು ಪಲಾಯನ ಮಾಡಲು ಬಿಡಬಾರದು ಎಂದು ನಿರ್ಧರಿಸಲಾಯಿತು. ಅದರಿಂದ ಆರಂಭವಾಗಿದ್ದೇ ಆಪರೇಷನ್ ಮಹಾದೇವ್ ಕಾರ್ಯಾಚರಣೆ ಎಂದು ಅಮಿತ್ ಶಾ ಮಾಹಿತಿ ನೀಡಿದ್ದಾರೆ.

ನಿನ್ನೆ ಎನ್​ಕೌಂಟರ್​​​ನಲ್ಲಿ ಮೃತನಾದ ಸುಲೇಮಾನ್ ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಆಗಿದ್ದ. ಇನ್ನಿಬ್ಬರು ಅಫ್ಘಾನ್ ಮತ್ತು ಜಿಬ್ರಾನ್ ಆತನ ಸಹಚರರಾಗಿದ್ದರು. ಇವರೆಲ್ಲರೂ ಪಾಕ್ ಮೂಲದ ನಿಷೇಧಿತ ಗುಂಪು ಲಷ್ಕರ್-ಎ-ತೈಬಾಗೆ ಸೇರಿದ ಪ್ರಮುಖ ಭಯೋತ್ಪಾದಕರು. ಪಹಲ್ಗಾಮ್ ದಾಳಿಯಲ್ಲಿ ಇವರದ್ದೇ ಕೈವಾಡವಿತ್ತು. 26 ಜನರನ್ನು ಕೊಂದವರನ್ನು ಹತ್ಯೆ ಮಾಡಲಾಗಿದೆ ಎಂದು ಅಮಿತ್ ಶಾ ಸದನಕ್ಕೆ ತಿಳಿಸಿದ್ದಾರೆ.

Published on: Jul 29, 2025 12:44 PM