ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ ಮಾಹಿತಿ
ಪ್ರವಾಸಕ್ಕೆಂದು ಹೋಗಿ ಕಾಶ್ಮೀರದಲ್ಲಿ ಸಿಲುಕಿಕೊಂಡಿರುವ ಕರ್ನಾಟಕದ ಜನರಿಗೆ ತವರಿಗೆ ವಾಪಸ್ ಆಗಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಕಚೇರಿ, ಸ್ಥಳೀಯ ಸಚಿವರ ಜೊತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತುಕತೆ ನಡೆಸಿ ಸೂಕ್ತ ವ್ಯವಸ್ಥೆ ಮಾಡಿದ್ದಾರೆ. ಇನ್ನು ಈ ಸಂಬಂಧ ಇಂದು (ಏಪ್ರಿಲ್ 23) ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.
ನವದೆಹಲಿ, (ಏಪ್ರಿಲ್ 23): ಪ್ರವಾಸಕ್ಕೆಂದು ಹೋಗಿ ಕಾಶ್ಮೀರದಲ್ಲಿ (Kashmir) ಸಿಲುಕಿಕೊಂಡಿರುವ ಕರ್ನಾಟಕದ ಜನರಿಗೆ ತವರಿಗೆ ವಾಪಸ್ ಆಗಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಕಚೇರಿ, ಸ್ಥಳೀಯ ಸಚಿವರ ಜೊತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಮಾತುಕತೆ ನಡೆಸಿ ಸೂಕ್ತ ವ್ಯವಸ್ಥೆ ಮಾಡಿದ್ದಾರೆ. ಇನ್ನು ಈ ಸಂಬಂಧ ಇಂದು (ಏಪ್ರಿಲ್ 23) ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.
ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಕಚೇರಿ, ಸ್ಥಳೀಯ ಸಚಿವರ ಜೊತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತುಕತೆ ನಡೆಸಿದ್ದು.ಪ್ರಧಾನಿಗಳ ಕಚೇರಿ, ಗೃಹ ಸಚಿವರ ಕಚೇರಿಯ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಕರ್ನಾಟಕದವರನ್ನು ಸುರಕ್ಷಿತರಾಗಿ ಹಿಂದಿರುಗಿಸಲು ವ್ಯವಸ್ಥೆ ನಡೆಯುತ್ತಿದೆ. ಗ್ರಾಹಕ ವ್ಯವಹಾರಗಳ ಸಚಿವರಾಗಿ ವೈಮಾನಿಕ ಟಿಕೆಟ್ ದರಕ್ಕೆ ಬ್ರೇಕ್ ಹಾಕಲಾಗಿದೆ. ಈ ಪರಿಸ್ಥಿತಿಯಲ್ಲಿ ಟಿಕೆಟ್ ದರ ಹೆಚ್ಚಳ ಮಾಡದಂತೆ ಡಿಜಿಸಿಎ ಹಾಗೂ ವಿಮಾನಯಾನ ಸಚಿವಾಲಯಕ್ಕೆ ಸೂಚನೆ ನೀಡಲಾಗಿದೆ ಹೇಳಿದರು.
ಕೇಂದ್ರ ಸರ್ಕಾರ ಶೂನ್ಯ ಅಸಹಿಷ್ಣುತೆ ಪದ್ದತಿ ಪಾಲಿಸುತ್ತಿದೆ. ನಿನ್ನೆ ನಡೆದ ದುರ್ಘಟನೆಯನ್ನು ಸಹಿಸುವುದಿಲ್ಲ ಶೂನ್ಯ ಅಸಹಿಷ್ಣುತೆ ಪದ್ದತಿಯಲ್ಲಿ ಮುಂದಿನ ಕೆಲಸ ನಡೆಯಲಿದೆ ಎಂದರು.

Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?

ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ

ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು

ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
