ಮುಂಬರುವ ಎಲ್ಲ ಚುನಾವಣೆಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯಲಿದೆ: ಬಿಎಸ್ ಯಡಿಯೂರಪ್ಪ

ಮುಂಬರುವ ಎಲ್ಲ ಚುನಾವಣೆಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯಲಿದೆ: ಬಿಎಸ್ ಯಡಿಯೂರಪ್ಪ

ಅರುಣ್​ ಕುಮಾರ್​ ಬೆಳ್ಳಿ
|

Updated on: Apr 16, 2024 | 12:22 PM

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಪಕ್ಷದ ಕೈ ಹಿಡಿಯಲಿವೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ ಅಂತ ಕೇಳಿದ್ದಕ್ಕೆ ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿಯವರ ಅಲೆಯೆದರು ಎಲ್ಲ ಗ್ಯಾರಂಟಿ ಯೋಜನೆಗಳು ಸ್ತಬ್ಧಗೊಳ್ಳಲಿವೆ ಎಂದರು.

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು (BS Yediyurappa) ಇಂದು ದಾವಣಗರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಪ್ರಚಾರ ಮಾಡುವಾಗ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು. ಬಿಜೆಪಿ ಮತ್ತು ಜೆಡಿಎಸ್ ನಡುವಿನ ಮೈತ್ರಿ (BJP JDS alliance) ಕೇವಲ ಲೋಕಸಭಾ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿಲ್ಲ, ಮುಂಬರುವ ಎಲ್ಲ ಚುನಾವಣೆಗಳಲ್ಲಿ ಮೈತ್ರಿ ಮುಂದುವರಿಯಲಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ (HD Devegowda) ನಡುವೆ ಮಾತುಕತೆಯಾಗಿದೆ ಎಂದು ಯಡಿಯೂರಪ್ಪ ಹೇಳಿದರು. ಹೆಚ್ ಡಿ ಕುಮಾರಸ್ವಾಮಿಯವರು ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು ಕುಮಾರಸ್ವಾಮಿ ಈಗಾಗಲೇ ಸ್ಪಷ್ಟನೆ ನೀಡಿರುವುದರಿಂದ ಪ್ರತಿಕ್ರಿಯಿಸುವ ಅವಶ್ಯಕತೆಯಿಲ್ಲ ಎಂದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಪಕ್ಷದ ಕೈ ಹಿಡಿಯಲಿವೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ ಅಂತ ಕೇಳಿದ್ದಕ್ಕೆ ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿಯವರ ಅಲೆಯೆದರು ಎಲ್ಲ ಗ್ಯಾರಂಟಿ ಯೋಜನೆಗಳು ಸ್ತಬ್ಧಗೊಳ್ಳಲಿವೆ ಎಂದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಈಶ್ವರಪ್ಪರನ್ನು ಪಕ್ಷದಿಂದ ಉಚ್ಚಾಟಿಸಲಾಗುವುದೇ ಅಂತ ಕೇಳಿದ ಪ್ರಶ್ನೆಗೆ ಅವರು ಪಕ್ಷ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಪ್ರಧಾನಿ ಮೋದಿಯವರ ಫೋಟೋ ಬಳಸದೆ ಮಗನ ಪರ ಪ್ರಚಾರ ಮಾಡುವಂತೆ ಯಡಿಯೂರಪ್ಪಗೆ ಸವಾಲು ಹಾಕುತ್ತೇನೆ: ಈಶ್ವರಪ್ಪ