ಸಿಎಂ ಸೇರಿದಂತೆ ಎಲ್ಲ ಸಚಿವರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಕಾರ್ಯಕರ್ತರ ಸಭೆ ನಡೆಸಬೇಕು: ಡಿಕೆ ಶಿವಕುಮಾರ್
ಶಿವಕುಮಾರ್ ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವುದರಿಂದ ನಗರದ ಎಲ್ಲ 28 ವಿಧಾನಸಭಾ ಕ್ಷೇತ್ರಗಳ ಕಾರ್ಯಕರ್ತರೊಂದಿಗೆ ಸಭೆಯನ್ನು ನಡೆಸುವುದಾಗಿ ಹೇಳಿದರು. ಒಂದು ದಿನದಲ್ಲಿ ಎರಡು ಅಥವಾ ಮೂರು ಕ್ಷೇತ್ರಗಳ ಕಾರ್ಯಕರ್ತರ ಸಭೆಯನ್ನು ತಾನು ಕರೆಯುವುದಾಗಿ ಡಿಸಿಎಂ ಹೇಳಿದರು. ಅವರ ಮಾತು ಕೇಳುತ್ತಿದ್ದರೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸದ್ಯಕ್ಕಂತೂ ಇಲ್ಲ ಎನಿಸುತ್ತದೆ.
ಬೆಂಗಳೂರು: ಬಿಜೆಪಿಯಂತೆ ಕಾಂಗ್ರೆಸ್ ಕೂಡ ಪಕ್ಷದ ಸಂಘಟನೆ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾ ಗೋಷ್ಠಿಯೊಂದನ್ನು ನಡೆಸಿ ಮಾತಾಡಿದ ಪಕ್ಷದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಸಚಿವ ಸಂಪುಟದ ಎಲ್ಲ ಸಚಿವರಿಗೆ ಮತ್ತು ಜಿಲ್ಲಾ ಉಸ್ತುವಾರಿ ಮಂತ್ರಿಗಳಿಗೆ ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸುವ ಟಾಸ್ಕ್ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಾನು ಸೇರಿದಂತೆ ಸಚಿವರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಭೆಗಳನ್ನು ನಡೆಸಬೇಕು, ಮಾರ್ಚ್ 23ರಿಂದ ಏಪ್ರಿಲ್ 1 ರೊಳಗೆ ಅಂದರೆ ಒಂದು ವಾರದ ಅವಧಿಯಲ್ಲಿ ಟಾಸ್ಕ್ಗಳನ್ನು ಮುಗಿಸಬೇಕು ಎಂದು ಶಿವಕುಮಾರ್ ಹೇಳಿದರು. ಸಚಿವರಿಗೆ ತಮ್ಮ ಕ್ಷೇತ್ರಗಳ ಕಾರ್ಯಕರ್ತರೊಂದಿಗೆ ಸಭೆಗಳನ್ನು ನಡೆಸಿದ ಬಳಿಕ ಸಮಯ ಉಳಿದರೆ ಬೇರೆ ಜಿಲ್ಲೆಗಳಿಗೂ ಹೋಗಿ ಸಭೆ ನಡೆಸುವಂತೆ ತಾನು ಸೂಚಿಸುವುದಾಗಿ ಶಿವಕುಮಾರ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಇನ್ಮುಂದೆ ಆರ್ಒ ಪ್ಲಾಂಟ್ಗಳ ನಿರ್ವಹಣೆ BWSSB ಸುಪರ್ದಿಗೆ: ಡಿಕೆ ಶಿವಕುಮಾರ್ ಸೂಚನೆ