ರಾಜ್ಯದ ಸಂಸತ್ ಸದಸ್ಯರಿಗೆ ಮಾನ ಮರ್ಯಾದೆ ಇದ್ದರೆ ಕಾವೇರಿ ನೀರಿಗಾಗಿ ಕೂಡಲೇ ರಾಜೀನಾಮೆ ಸಲ್ಲಿಸಬೇಕು: ವಾಟಾಳ್ ನಾಗರಾಜ್

|

Updated on: Sep 21, 2023 | 7:28 PM

ರಾಜ್ಯದ ಈ ಸಂಕಷ್ಟದ ಸಮಯದಲ್ಲಿ ಅವರು ತಮ್ಮ ಒಗ್ಗಟ್ಟಿನ ಶಕ್ತಿ ಪ್ರದರ್ಶಿಸಬೇಕಿದೆ ಎಂದು ಹೇಳಿದ ಅವರು ಕಾವೇರಿ ನೀರಿಗಾಗಿ ಕನ್ನಡಿಗರು ಕೆಲ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲೇಬೇಕಿದೆ ಎಂದರು. ಬಳಿಕ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಉದ್ದೇಶಿಸಿ, ಅವರು ಈಗ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೋ ಗೊತ್ತಿಲ್ಲ, ಅದಕ್ಕಾಗಿ ತಾವು ಕಾಯುತ್ತಿರುವುದಾಗಿ ಹೇಳಿದರು.

ಬೆಂಗಳೂರು: ಹಿರಿಯ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ರಾಜ್ಯದ ಸಂಸತ್ ಸದಸ್ಯರು ಹಾಗೂ ರಾಜ್ಯ ಸಭಾ ಸದಸ್ಯರ (MPs and Rajya Sabha members) ಮೇಲೆ ತೀವ್ರ ಸ್ವರೂಪದ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಪತ್ರಿಕಾ ಗೋಷ್ಟಿ ನಡೆಸಿ ಮಾತಾಡಿದ ಅವರು, ಕಾವೇರಿ ನೀರಿಗಾಗಿ (Cauvery water) ರಾಜ್ಯದ ಸಂಸತ್ ಸದಸ್ಯರೆಲ್ಲ ತ್ಯಾಗ ಮಾಡಬೇಕಾದ ಗಟ್ಟಿ ನಿರ್ಧಾರ ತೆಗೆದುಕೊಳ್ಳಬೇಕಾದ ಸಮಯ ಬಂದಿದೆ. ಅವರಲ್ಲಿ ಮಾನ ಮರ್ಯಾದೆ ಇದ್ದರೆ ಕೂಡಲೇ ಸಂಸತ್ ಸದಸ್ಯತ್ವಕ್ಕೆ ಕೂಡಲೇ ರಾಜೀನಾಮೆ ಸಲ್ಲಿಸಬೇಕು ಎಂದು ನಾಗರಾಜ್ ಹೇಳಿದರು. ಸದಸ್ಯರು ಮುಂಬರುವ ಚುನಾವಣೆಯಲ್ಲಿ ಮತ್ತೇ ಸ್ಪರ್ಧಿಸುತ್ತಾರೋ ಇಲ್ಲವೋ ಗೊತ್ತಿಲ್ಲ ಆದರೆ ರಾಜ್ಯದ ಈ ಸಂಕಷ್ಟದ ಸಮಯದಲ್ಲಿ ಅವರು ತಮ್ಮ ಒಗ್ಗಟ್ಟಿನ ಶಕ್ತಿ ಪ್ರದರ್ಶಿಸಬೇಕಿದೆ ಎಂದು ಹೇಳಿದ ಅವರು ಕಾವೇರಿ ನೀರಿಗಾಗಿ ಕನ್ನಡಿಗರು ಕೆಲ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲೇಬೇಕಿದೆ ಎಂದರು. ಬಳಿಕ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಉದ್ದೇಶಿಸಿ, ಅವರು ಈಗ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೋ ಗೊತ್ತಿಲ್ಲ, ಅದಕ್ಕಾಗಿ ತಾವು ಕಾಯುತ್ತಿರುವುದಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us on