AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್ ಚಳಿಗಾಲದ ಅಧಿವೇಶನಕ್ಕೂ ಮುನ್ನ ಸರ್ವಪಕ್ಷ ಸಭೆ

ಸಂಸತ್ ಚಳಿಗಾಲದ ಅಧಿವೇಶನಕ್ಕೂ ಮುನ್ನ ಸರ್ವಪಕ್ಷ ಸಭೆ

ನಯನಾ ರಾಜೀವ್
|

Updated on: Nov 30, 2025 | 12:22 PM

Share

ಸಂಸತ್ ಚಳಿಗಾಲದ ಅಧಿವೇಶನದ ಡಿಸೆಂಬರ್ 1ರಿಂದ ಆರಂಭವಾಗಲಿದ್ದು, ಅದಕ್ಕೂ ಮುನ್ನ ಕೇಂದ್ರ ಸರ್ವಪಕ್ಷ ಸಭೆ ನಡೆಸಿದೆ.ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ, ದೆಹಲಿ ಸ್ಫೋಟ ಮತ್ತು ಉಭಯ ಸದನಗಳಲ್ಲಿ ಪ್ರಸ್ತಾಪಿಸಲು ಬಯಸುವ ವಿದೇಶಾಂಗ ನೀತಿ ವಿಷಯಗಳು ಸೇರಿದಂತೆ ವಿವಿಧ ವಿಷಯಗಳನ್ನು ವಿರೋಧ ಪಕ್ಷಗಳು ಎತ್ತುವ ಸಾಧ್ಯತೆಯಿದೆ.ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮತ್ತು ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್.

ನವದೆಹಲಿ, ನವೆಂಬರ್ 30: ಸಂಸತ್ ಚಳಿಗಾಲದ ಅಧಿವೇಶನದ ಡಿಸೆಂಬರ್ 1ರಿಂದ ಆರಂಭವಾಗಲಿದ್ದು, ಅದಕ್ಕೂ ಮುನ್ನ ಕೇಂದ್ರ ಸರ್ವಪಕ್ಷ ಸಭೆ ನಡೆಸಿದೆ.ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ, ದೆಹಲಿ ಸ್ಫೋಟ ಮತ್ತು ಉಭಯ ಸದನಗಳಲ್ಲಿ ಪ್ರಸ್ತಾಪಿಸಲು ಬಯಸುವ ವಿದೇಶಾಂಗ ನೀತಿ ವಿಷಯಗಳು ಸೇರಿದಂತೆ ವಿವಿಧ ವಿಷಯಗಳನ್ನು ವಿರೋಧ ಪಕ್ಷಗಳು ಎತ್ತುವ ಸಾಧ್ಯತೆಯಿದೆ.ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮತ್ತು ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್.

ವಿರೋಧ ಪಕ್ಷದ ಪರವಾಗಿ ಕಾಂಗ್ರೆಸ್ ನಾಯಕರಾದ ಗೌರವ್ ಗೊಗೊಯ್ ಮತ್ತು ಪ್ರಮೋದ್ ತಿವಾರಿ, ಡಿಎಂಕೆಯ ಟಿಆರ್ ಬಾಲು, ಟಿಎಂಸಿಯ ಡೆರೆಕ್ ಮತ್ತು ಐಯುಎಂಎಲ್‌ನ ಇಟಿ ಮೊಹಮ್ಮದ್ ಬಶೀರ್ ಭಾಗವಹಿಸಿದ್ದರು. ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರು ಪಕ್ಷದ ಅಧ್ಯಕ್ಷರಾಗಿ ಮತ್ತು ರಾಜ್ಯಸಭೆಯಲ್ಲಿ ಸದನದ ನಾಯಕರಾಗಿ ಬಿಜೆಪಿ ಪ್ರತಿನಿಧಿಯಾಗಿ ಭಾಗವಹಿಸಿದ್ದರು. ಆರ್‌ಜೆಡಿಯ ಮನೋಜ್ ಝಾ, ಎಸ್‌ಎಡಿಯ ಹರ್‌ಸಿಮ್ರತ್ ಕೌರ್ ಬಾದಲ್ ಮತ್ತು ಜೆಡಿಯುನ ಸಂಜಯ್ ಝಾ ಇತರರು ಕೂಡ ಇದ್ದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ