‘ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ’; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಭಾರತದ ಅಧ್ಯಕ್ಷತೆಯಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಜಗತ್ತಿನಾದ್ಯಂತದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಅಂತಾರಾಷ್ಟ್ರೀಯ ರಾಜಕೀಯ, ಆರ್ಥಿಕತೆ, ವ್ಯಾಪಾರ, ಹೂಡಿಕೆ, ತಂತ್ರಜ್ಞಾನ, ಇಂಧನ ಭದ್ರತೆ, ಆಹಾರ ಭದ್ರತೆ ಮತ್ತು ಇನ್ನೂ ಹೆಚ್ಚಿನ ವಿಷಯಗಳ ಕುರಿತು ನಾಯಕರು ಚರ್ಚೆ ನಡೆಸುವ ನಿರೀಕ್ಷೆಯಿದೆ. ಜಗತ್ತಿನಾದ್ಯಂತ ಬದಲಾಗುತ್ತಿರುವ ರಾಜಕೀಯ ಮತ್ತು ಆರ್ಥಿಕ ಪರಿಸ್ಥಿತಿಗಳ ಸಂದರ್ಭದಲ್ಲಿ ಈ ಸಭೆಯು ಅತ್ಯಂತ ಮಹತ್ವದ್ದಾಗಿದೆ.
ನವದೆಹಲಿ, ಸೆಪ್ಟೆಂಬರ್ 10: ಸೆಪ್ಟೆಂಬರ್ 12 ಮತ್ತು 13ರಂದು ಭಾರತದಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಗೆ ಎಲ್ಲವೂ ಸಿದ್ಧವಾಗಿದೆ. “ಬ್ರಿಕ್ಸ್ 2026ಕ್ಕೆ ಎಲ್ಲವೂ ಸಿದ್ಧವಾಗಿದೆ!” ಎಂದು ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ದೆಹಲಿಯಲ್ಲಿ ನಡೆಯಲಿರುವ ಈ ಶೃಂಗಸಭೆಯು ಜಾಗತಿಕ ರಾಜಕೀಯ, ಆರ್ಥಿಕ ಸಹಕಾರ, ವ್ಯಾಪಾರ, ತಂತ್ರಜ್ಞಾನ ಮತ್ತು ಇತರ ವಿಷಯಗಳ ಕುರಿತು ಪ್ರಮುಖ ಚರ್ಚೆಗಳನ್ನು ಒಳಗೊಂಡಿರುತ್ತದೆ. ಬ್ರಿಕ್ಸ್ ಶೃಂಗಸಭೆಗೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ತೋರಿಸುವ ವಿಡಿಯೋವನ್ನು ಪ್ರಧಾನಿ ಮೋದಿ ಹಂಚಿಕೊಂಡಿದ್ದಾರೆ.
ಭಾರತದ ಅಧ್ಯಕ್ಷತೆಯಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಜಗತ್ತಿನಾದ್ಯಂತದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಅಂತಾರಾಷ್ಟ್ರೀಯ ರಾಜಕೀಯ, ಆರ್ಥಿಕತೆ, ವ್ಯಾಪಾರ, ಹೂಡಿಕೆ, ತಂತ್ರಜ್ಞಾನ, ಇಂಧನ ಭದ್ರತೆ, ಆಹಾರ ಭದ್ರತೆ ಮತ್ತು ಇನ್ನೂ ಹೆಚ್ಚಿನ ವಿಷಯಗಳ ಕುರಿತು ನಾಯಕರು ಚರ್ಚೆ ನಡೆಸುವ ನಿರೀಕ್ಷೆಯಿದೆ. ಜಗತ್ತಿನಾದ್ಯಂತ ಬದಲಾಗುತ್ತಿರುವ ರಾಜಕೀಯ ಮತ್ತು ಆರ್ಥಿಕ ಪರಿಸ್ಥಿತಿಗಳ ಸಂದರ್ಭದಲ್ಲಿ ಈ ಸಭೆಯು ಅತ್ಯಂತ ಮಹತ್ವದ್ದಾಗಿದೆ.
ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಲವಾರು ರಾಷ್ಟ್ರಗಳ ಮುಖ್ಯಸ್ಥರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಭಾರತ-ಚೀನಾ ಸಂಬಂಧಗಳು, ಅಂತಾರಾಷ್ಟ್ರೀಯ ಬೆಳವಣಿಗೆಗಳು, ವ್ಯಾಪಾರ ಮತ್ತು ಭದ್ರತೆಯಂತಹ ವಿಷಯಗಳು ಆದ್ಯತೆಯಾಗಿರುತ್ತದೆ. ಚೀನಾ, ರಷ್ಯಾ, ಇರಾನ್ ಸೇರಿದಂತೆ ಹಲವು ದೇಶಗಳ ನಾಯಕರು ಈ ವಾರಾಂತ್ಯದಲ್ಲಿ ದೆಹಲಿಗೆ ಆಗಮಿಸಲಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ