AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಣ್ಣಿನ ಕಾರಣದಿಂದಲೇ ಇಷ್ಟೆಲ್ಲಾ ಸಂಕಷ್ಟ: ವಿನಯ್ ಕುಲಕರ್ಣಿಗೆ ದೈವ ನೀಡಿದ ಸೂಚನೆ ಏನು?

ಹೆಣ್ಣಿನ ಕಾರಣದಿಂದಲೇ ಇಷ್ಟೆಲ್ಲಾ ಸಂಕಷ್ಟ: ವಿನಯ್ ಕುಲಕರ್ಣಿಗೆ ದೈವ ನೀಡಿದ ಸೂಚನೆ ಏನು?

ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Jul 27, 2024 | 11:10 PM

Share

ಧಾರವಾಡ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸದ್ಯ ಕೊರಗಜ್ಜ ದೈವದ ಮೊರೆ ಹೋಗಿದ್ದಾರೆ. 48 ದಿನಗಳ ಒಳಗೆ ಧಾರವಾಡ ಕ್ಷೇತ್ರ ಪ್ರವೇಶ ನಿರ್ಬಂಧ ತೆರವಿನ ಬಗ್ಗೆ ಕೊರಗಜ್ಜ ಅಭಯ ನೀಡಿದೆ. ಜೊತೆಗೆ ಇನ್ನು ಮೂರು ವರ್ಷಗಳ ಕಾಲ ಬಹಳ ಸೂಕ್ಷ್ಮವಾಗಿ ಇರುವಂತೆ ದೈವದ ಸೂಚನೆ ನೀಡಲಾಗಿದೆ.

ಮಂಗಳೂರು, ಜುಲೈ 27: ಕೊರಗಜ್ಜನ ಬಳಿ ಸಂಕಷ್ಟದ ಬಗ್ಗೆ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಅರಿಕೆ ಮಾಡಿಕೊಂಡಿದ್ದರು. ಮುಂದಿನ ತಿಂಗಳು ಕ್ಷೇತ್ರ ಪ್ರವೇಶಕ್ಕಿರುವ ನಿರ್ಬಂಧದ ತೀರ್ಪಿನ ಬಗ್ಗೆ ಪ್ರಸ್ತಾಪ್ಪಿಸಿದ್ದರು. ಇದಕ್ಕೆ ಪ್ರತಿಯಾಗಿ ದೈವ ನುಡಿದಿದ್ದು, 48 ದಿನಗಳ ಒಳಗೆ ಧಾರವಾಡ ಕ್ಷೇತ್ರ ಪ್ರವೇಶ ನಿರ್ಬಂಧ ತೆರವಿನ ಬಗ್ಗೆ ಕೊರಗಜ್ಜ ಅಭಯ ನೀಡಿದೆ. ಜೊತೆಗೆ ಇನ್ನು ಮೂರು ವರ್ಷಗಳ ಕಾಲ ಬಹಳ ಸೂಕ್ಷ್ಮವಾಗಿ ಇರುವಂತೆ ದೈವದ ಸೂಚನೆ ನೀಡಲಾಗಿದೆ. ಹೆಣ್ಣಿನ ಕಾರಣದಿಂದಲೇ ಈ ಎಲ್ಲಾ ಸಂಕಷ್ಟ ಎದುರಾಗಿದೆ. ಅಧರ್ಮದಲ್ಲಿ ಹೋದವರನ್ನ ನಾನು ನೋಡಿಕೊಳ್ಳುತ್ತೇನೆ. ಸಂಕಷ್ಟ ನಿವಾರಣೆ ಬಳಿಕ ಸಂತೋಷದಿಂದ ಕೋಲಸೇವೆ ನೀಡುವಂತೆ ದೈವ ನುಡಿದಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More