ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸುವವರು ದೇಶದ್ರೋಹಿಗಳು: ಪ್ರಮೋದ್ ಮುತಾಲಿಕ್
ರಾಜ್ಯ ಬಿಜೆಪಿ ನಾಯಕರಿಗೆ ವಕ್ಫ್ ಬೋರ್ಡ್ ಬಗ್ಗೆ ಮಾತಾಡುವ ಹಕ್ಕಿಲ್ಲ, ಅನ್ವರ್ ಮಣಿಪ್ಪಾಡಿ ನೀಡಿದ ವರದಿಯನ್ನು ಕೊನೇವರೆಗೂ ಕಡೆಗಣಿಸಿದ ಅವರಿಗೆ ನಾಚಿಕೆಯಾಗಬೇಕು, ಹಾಗೆಯೇ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿದ ಸಂವಿಧಾನವನ್ನು ಧಿಕ್ಕರಿಸಿ ವಕ್ಫ್ ಬೋರ್ಡ್ ಗೆ ಅಧಿಕಾರ ನೀಡಿದ ಕಾಂಗ್ರೆಸ್ ಗೂ ನಾಚಿಕೆಯಾಗಬೇಕು ಎಂದು ಮುತಾಲಿಕ್ ಹೇಳಿದರು.
ಹುಬ್ಬಳ್ಳಿ, ಏಪ್ರಿಲ್ 3: ವಕ್ಫ್ ತಿದ್ದುಪಡಿ ಮಸೂದೆಯನ್ನು ಜಾರಿಗೆ ತರುವ ಮೂಲಕ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಭಿನಂದನೀಯ ಮತ್ತು ಸ್ವಾಗತಾರ್ಹ ಕೆಲಸ ಮಾಡಿದೆ ಎಂದು ಶ್ರೀರಾಮಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು. ಮಾಧ್ಯಮಗಳೋಡನೆ ಮಾತಾಡಿದ ಅವರು, ವಕ್ಫ್ ಬೋರ್ಡ್ ಹೆಸರಲ್ಲಿ ದಶಕಗಳಿಂದ ಕಂಡ ಕಂಡ ಜಮೀನುಗಳನ್ನು ಲೂಟಿ ಮಾಡುತ್ತಿದ್ದವರಿಗೆ ಕಡಿವಾಣ ಬಿದ್ದಿದೆ, ಲೂಟಿಕೋರರ ಪರವಾಗಿ ನಿಂತುಕೊಂಡವರಿಗೆ ನಾಚಿಕೆಯಾಗಬೇಕು, ಅವರು ದೇಶದ್ರೋಹಿಗಳು, ವಕ್ಫ್ ಬೋರ್ಡ್ ಹೆಸರಲ್ಲಿ ಜಮೀನು ಲೂಟಿ ಮಾಡಿದವರ ಪೈಕಿ ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆಯವರ ಹೆಸರು ಕೂಡ ನಿನ್ನೆ ಸದನದಲ್ಲಿ ಪ್ರಸ್ತಾಪವಾಗಿದೆ ಎಂದು ಹೇಳಿದರು.
ಇದನ್ನೂ ಓದಿ: ಹಿಂದೂಗಳ ಸ್ಮಶಾನದ ಕಾಂಪೌಂಡ್ ಒಡೆದು ಇಂದಿರಾ ಕ್ಯಾಂಟೀನ್ ನಿರ್ಮಾಣ; ಪ್ರಮೋದ್ ಮುತಾಲಿಕ್ ಆರೋಪ
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ