ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸುವವರು ದೇಶದ್ರೋಹಿಗಳು: ಪ್ರಮೋದ್ ಮುತಾಲಿಕ್

ಅರುಣ್​ ಕುಮಾರ್​ ಬೆಳ್ಳಿ

Updated on: Apr 03, 2025 | 1:57 PM

ರಾಜ್ಯ ಬಿಜೆಪಿ ನಾಯಕರಿಗೆ ವಕ್ಫ್ ಬೋರ್ಡ್ ಬಗ್ಗೆ ಮಾತಾಡುವ ಹಕ್ಕಿಲ್ಲ, ಅನ್ವರ್ ಮಣಿಪ್ಪಾಡಿ ನೀಡಿದ ವರದಿಯನ್ನು ಕೊನೇವರೆಗೂ ಕಡೆಗಣಿಸಿದ ಅವರಿಗೆ ನಾಚಿಕೆಯಾಗಬೇಕು, ಹಾಗೆಯೇ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿದ ಸಂವಿಧಾನವನ್ನು ಧಿಕ್ಕರಿಸಿ ವಕ್ಫ್ ಬೋರ್ಡ್ ಗೆ ಅಧಿಕಾರ ನೀಡಿದ ಕಾಂಗ್ರೆಸ್ ಗೂ ನಾಚಿಕೆಯಾಗಬೇಕು ಎಂದು ಮುತಾಲಿಕ್ ಹೇಳಿದರು.

ಹುಬ್ಬಳ್ಳಿ, ಏಪ್ರಿಲ್ 3: ವಕ್ಫ್ ತಿದ್ದುಪಡಿ ಮಸೂದೆಯನ್ನು ಜಾರಿಗೆ ತರುವ ಮೂಲಕ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಭಿನಂದನೀಯ ಮತ್ತು ಸ್ವಾಗತಾರ್ಹ ಕೆಲಸ ಮಾಡಿದೆ ಎಂದು ಶ್ರೀರಾಮಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು. ಮಾಧ್ಯಮಗಳೋಡನೆ ಮಾತಾಡಿದ ಅವರು, ವಕ್ಫ್ ಬೋರ್ಡ್ ಹೆಸರಲ್ಲಿ ದಶಕಗಳಿಂದ ಕಂಡ ಕಂಡ ಜಮೀನುಗಳನ್ನು ಲೂಟಿ ಮಾಡುತ್ತಿದ್ದವರಿಗೆ ಕಡಿವಾಣ ಬಿದ್ದಿದೆ, ಲೂಟಿಕೋರರ ಪರವಾಗಿ ನಿಂತುಕೊಂಡವರಿಗೆ ನಾಚಿಕೆಯಾಗಬೇಕು, ಅವರು ದೇಶದ್ರೋಹಿಗಳು, ವಕ್ಫ್ ಬೋರ್ಡ್ ಹೆಸರಲ್ಲಿ ಜಮೀನು ಲೂಟಿ ಮಾಡಿದವರ ಪೈಕಿ ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆಯವರ ಹೆಸರು ಕೂಡ ನಿನ್ನೆ ಸದನದಲ್ಲಿ ಪ್ರಸ್ತಾಪವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಹಿಂದೂಗಳ ಸ್ಮಶಾನದ ಕಾಂಪೌಂಡ್ ಒಡೆದು ಇಂದಿರಾ ಕ್ಯಾಂಟೀನ್ ನಿರ್ಮಾಣ; ಪ್ರಮೋದ್ ಮುತಾಲಿಕ್ ಆರೋಪ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.