Video: ಶಾಲಾ ಜಾಗ ಒತ್ತುವರಿ ಆರೋಪ: ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಶಾಲಾ ಕಾಂಪೌಂಡ್ ನಿರ್ಮಾಣ ವಿಚಾರಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿರುವಂತಹ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಪಾಪಿಶೆಟ್ಟಿಪಲ್ಲಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಎರಡು ಪಕ್ಷದ ಕಾರ್ಯಕರ್ತರಿಗೆ ಗಾಯಗಳಾಗಿದ್ದು, ಗೌನಿಪಲ್ಲಿ ಹಾಗೂ ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೋಲಾರ, ನವೆಂಬರ್ 06: ಶಾಲಾ ಕಾಂಪೌಂಡ್ ನಿರ್ಮಾಣ ವಿಚಾರಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ (Clash) ನಡೆದಿರುವಂತಹ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಪಾಪಿಶೆಟ್ಟಿಪಲ್ಲಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಎರಡು ಪಕ್ಷದ ಕಾರ್ಯಕರ್ತರಿಗೆ ಗಾಯಗಳಾಗಿದ್ದು, ಗೌನಿಪಲ್ಲಿ ಹಾಗೂ ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಾಲಾ ಜಾಗ ಒತ್ತುವರಿ ಆರೋಪ ಕೇಳಿಬಂದಿದ್ದು, ಸರ್ವೇ ನಂತರ ಕಾಮಗಾರಿ ಮಾಡಲು ಜೆಡಿಎಸ್ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ. ಸರ್ವೇ ಮಾಡಿಸದೆ ಕಾಂಗ್ರೆಸ್ ಕಾರ್ಯಕರ್ತರು ಕಾಮಗಾರಿ ಮಾಡಲು ಮುಂದಾಗಿದ್ದಾರೆ ಎಂಬ ಆರೋಪ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಗೌನಿಪಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos