ರಾಹುಲ್ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತು ಎಂಬ ಆರೋಪ ಸುಳ್ಳು: ಶೋಭಾ ಕರಂದ್ಲಾಜೆ
ಜುಲೈ 22ರಿಂದ ನಡೆಯಲಿರುವ ಬಜೆಟ್ ಅಧಿವೇಶನದಲ್ಲೂ ಕಾಂಗ್ರೆಸ್ ಸಂಸದರು ಇಂಥ ಆರೋಪಗಳನ್ನು ಮಾಡುವ ಸಾಧ್ಯತೆ ಇದೆ ಎಂದು ಶೋಭಾ ಕರಂದ್ಲಾಜೆ ಹೇಳಿದರು. ನಿನ್ನೆ ಸಂಸತ್ತಿನಲ್ಲಿ ರಾಹುಲ್ ಗಾಂಧಿ ಮೈಕ್ ಬಗ್ಗೆ ತಕರಾರು ಎತ್ತಿದಾಗ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮೈಕ್ ಅಫ್ ಮಾಡೋದು ಆನ್ ಮಾಡೋದು ನನ್ನ ಕೆಲಸವಲ್ಲ ಎಂದಿದ್ದರು.
ಬೆಂಗಳೂರು: ನಿನ್ನೆ ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅವ್ಯವಹಾರಗಳು, ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಕೆಲ ಪರೀಕ್ಷೆಗಳನ್ನು ಸ್ಥಗಿತಗೊಳಿಸಿರುವ ಬಗ್ಗೆ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತು ಎಂದು ಕಾಂಗ್ರೆಸ್ ಪಕ್ಷ ಮಾಡುತ್ತಿರುವ ಆರೋಪ ಸುಳ್ಳೆಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಶೋಭಾ ಕರಂದ್ಲಾಜೆ, ಸಂಸತ್ತಿನಲ್ಲಿ ಮಾತಾಡುವ ಅವಕಾಶ ಎಲ್ಲರಿಗೂ ಇದೆ, ರಾಷ್ಟ್ರಪತಿಯವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತಾಡಿದ ನಂತರ ಅಭಿನಂದನಾ ಪ್ರಸ್ತಾವದಲ್ಲಿ ಯಾವುದೇ ಪಕ್ಷದ ಸಂಸದ ಸಂಸತ್ತಿನಲ್ಲಿ ಯಾವುದೇ ವಿಷಯದ ಬಗ್ಗೆ ಮಾತಾಡಬಹುದು, ಇದು ಮೊದಲಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯವಾಗಿದೆ ಎಂದು ಅವರು ಹೇಳಿದರು. ಪರಿಸ್ಥಿತಿ ಹೀಗಿರುವಾಗ ರಾಷ್ಟ್ರಪತಿಯವರನ್ನು ಅಪಮಾನ ಮಾಡುವದಕ್ಕೋಸ್ಕರ ಕಾಂಗ್ರೆಸ್ ಪಕ್ಷದ ನಾಯಕರು ಉದ್ದೇಶಪೂರ್ವಕವಾಗಿ ಆರೋಪ ಮಾಡುತ್ತಿದ್ದಾರೆ ಎಂದು ಶೋಭಾ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ದರ್ಶನ್ ಕಾಂಗ್ರೆಸ್ ಪರ ಕೆಲಸ ಮಾಡಿದರೆಂದು ಶಾಮಿಯಾನ ಹಾಕಿ ರಕ್ಷಣೆ ಮಾಡುತ್ತಿದ್ದಾರಾ: ಶೋಭಾ ಕರಂದ್ಲಾಜೆ ಪ್ರಶ್ನೆ