Jarkiholi Vs Shivakumar | ರಮೇಶ್ ಮಾಡಿರುವ ಆರೋಪಗಳು ವೈಯಕ್ತಿಕವಾಗಿವೆ, ನಾನು ಪ್ರತಿಕ್ರಿಯಿಸುವುದು ಉಚಿತವಲ್ಲ: ಸತೀಶ್ ಜಾರಕಿಹೊಳಿ

ಅರುಣ್​ ಕುಮಾರ್​ ಬೆಳ್ಳಿ

Updated on: Jan 30, 2023 | 4:53 PM

ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಸತೀಶ್ ಅವರು, ಅವರ ಆರೋಪಗಳಿಗೆ ಸಂಬಂಧಿಸಿದಂತೆ ಪಕ್ಷದ ಅಧ್ಯಕ್ಷರು ಮತ್ತು ಸಿ ಎಲ್ ಪಿ ನಾಯಕ ಪ್ರತಿಕ್ರಿಯೆ ನೀಡುತ್ತಾರೆ ಎಂದು ಹೇಳಿದರು.

ಬೆಳಗಾವಿ: ರಮೇಶ್ ಜಾರಕಿಹೊಳಿ (Ramesh Jarkiholi) ಅವರು ಬೆಳಗಾವಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಕೆಪಿಸಿಸಿ ಆಧ್ಯಕ್ಷ ಡಿಕೆ ಶಿವಕುಮಾರ (DK Shivakumar) ಮತ್ತು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರ ವಿರುದ್ಧ ಆರೋಪಗಳನ್ನು ಮಾಡಿದ ಬಳಿಕ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ರಮೇಶ್ ಜಾರಕಿಹೊಳಿ ಅವರ ಸಹೋದರೂ ಆಗಿರುವ ಸತೀಶ್ ಜಾರಕಿಹೊಳಿ (Satish Jarkiholi) ಅವರು, ಇದು ವೈಯಕ್ತಿಕ ವಿಷಯವಾಗಿರುವುದರಿಂದ ತಾನೇನೂ ಹೇಳಲಾಗದು ಎಂದರು. ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಅವರ ಆರೋಪಗಳಿಗೆ ಸಂಬಂಧಿಸಿದಂತೆ ಪಕ್ಷದ ಅಧ್ಯಕ್ಷರು ಮತ್ತು ಸಿ ಎಲ್ ಪಿ ನಾಯಕ ಪ್ರತಿಕ್ರಿಯೆ ನೀಡುತ್ತಾರೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jan 30, 2023 04:52 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.