ಬಾಗಲಕೋಟೆ ಬೈ ಎಲೆಕ್ಷನ್​​: ಮತದಾರರಿಗೆ ಹಣ ಹಂಚಿತಾ ಕಾಂಗ್ರೆಸ್​​?; ವಿಡಿಯೋ ವೈರಲ್​​

Edited By:

Updated on: Apr 09, 2026 | 1:06 PM

ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮತದಾರರಿಗೆ 500 ರೂ. ಹಂಚಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತ ವಿಡಿಯೋವೊಂದು ವೈರಲ್​​ ಆಗಿದ್ದು, ನವನಗರದ ವಾಂಬೆ ಕಾಲೋನಿಯಲ್ಲಿ ಮತದಾರರಿಗೆ ಆಮಿಷ ಒಡ್ಡಲಾಗಿರುವ ದೃಶ್ಯ ಇದು ಎನ್ನಲಾಗಿದೆ. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಕಾಂಗ್ರೆಸಿಗರು ಕೋಟ್ಯಾಂತರ ರೂಪಾಯಿ ಹಂಚಿದ್ದಾರೆ ಎಂದು ಆರೋಪಿಸಿದ್ದ ಬೆನ್ನಲ್ಲೇ ಘಟನೆ ನಡೆದಿದೆ.

ಬಾಗಲಕೋಟೆ, ಏಪ್ರಿಲ್​​ 09: ಉಪ ಚುನಾವಣೆ ಗೆಲ್ಲಲು ಕಾಂಗ್ರೆಸಿಗರು ಕೋಟ್ಯಾಂತರ ರೂಪಾಯಿ ಹಣವನ್ನು ಹಂಚಿಕೆ ಮಾಡಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ದೂರಿದ್ದ ಬೆನ್ನಲ್ಲೇ ಮತದಾರರಿಗೆ ಕಾಂಗ್ರೆಸಿಗರು 500 ರೂಪಾಯಿ ಹಂಚಿರುವ ಆರೋಪ ಕೇಳಿಬಂದಿದೆ. ನವನಗರದ ವಾಂಬೆ ಕಾಲೋನಿಯಲ್ಲಿ ಕಾರಲ್ಲಿ ಬಂದವರು ಮತದಾರರಿಗೆ ಹಣ ನೀಡಿ ಆಮಿಷವೊಡ್ಡಿದ್ದು, ಕಾಂಗ್ರೆಸಿಗರು ಕೇವಲ ಐದುನೂರು ಕೊಟ್ಟರು ಎಂದು ಮಹಿಳೆಯೋರ್ವರು ಅಲವತ್ತುಕೊಂಡ ಪ್ರಸಂಗ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Apr 09, 2026 01:03 PM
Follow Us