ಅನ್ನಭಾಗ್ಯ ಇ-ಕೆವೈಸಿ ಹೆಸರಿನಲ್ಲಿ ರೇಷನ್ ಅಂಗಡಿ ಮಾಲೀಕರಿಂದ ಹಣ ವಸೂಲಿ ಆರೋಪ: ಶಿವಮೊಗ್ಗದಲ್ಲಿ ವ್ಯಾಪಕ ಆಕ್ರೋಶ

Edited By:

Updated on: Oct 06, 2026 | 9:32 PM

ಶಿವಮೊಗ್ಗ ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಅನ್ನಭಾಗ್ಯ ಯೋಜನೆಯ ಇ-ಕೆವೈಸಿ ಪ್ರಕ್ರಿಯೆಗಾಗಿ ಸಾರ್ವಜನಿಕರು ಪರದಾಡುತ್ತಿದ್ದಾರೆ. ಭದ್ರಾವತಿ ತಾಲೂಕಿನ ದೊಡ್ಡೇರಿ ಗ್ರಾಮದ ನ್ಯಾಯಬೆಲೆ ಅಂಗಡಿ ಮಾಲೀಕ ಶಬ್ಬೀರ್, ಬಡವರಿಂದ 50 ರಿಂದ 100 ರೂಪಾಯಿ ವಸೂಲಿ ಮಾಡುತ್ತಿದ್ದು, ಇದನ್ನು ಪ್ರಶ್ನಿಸಿದವರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಶಿವಮೊಗ್ಗ, ಅ.6: ಅನ್ನಭಾಗ್ಯ ಯೋಜನೆಯ ಪ್ರಯೋಜನ ಪಡೆಯಲು ಇ-ಕೆವೈಸಿ (e-KYC) ಕಡ್ಡಾಯಗೊಳಿಸಿರುವ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳ ಮುಂದೆ ಸಾರ್ವಜನಿಕರು ಪ್ರತಿದಿನ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಇ-ಕೆವೈಸಿ ಪ್ರಕ್ರಿಯೆಯನ್ನು ದುರ್ಬಳಕೆ ಮಾಡಿಕೊಂಡು, ಭದ್ರಾವತಿ ತಾಲೂಕಿನ ದೊಡ್ಡೇರಿ ಗ್ರಾಮದ ನ್ಯಾಯಬೆಲೆ ಅಂಗಡಿ ಮಾಲೀಕ ಶಬ್ಬೀರ್ ಅವರು ಬಡವರಿಂದ 50 ರಿಂದ 100 ರೂಪಾಯಿ ವಸೂಲಿ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಕೇಳಿಬಂದಿದೆ. ಇ-ಕೆವೈಸಿ ಮಾಡಿಸಲು ಬಂದ ಸಾರ್ವಜನಿಕರನ್ನು ಸರಿಯಾಗಿ ಸ್ಪಂದಿಸದೆ, ತಾಂತ್ರಿಕ ಸಮಸ್ಯೆಗಳ ನೆಪ ಹೇಳಿ ಅವರನ್ನು ಅಲೆದಾಡಿಸಲಾಗುತ್ತಿದೆ. ಬಡವರಿಂದ ಹಣ ವಸೂಲಿ ಮಾಡುವುದಲ್ಲದೆ, ಇದನ್ನು ಪ್ರಶ್ನಿಸಿದವರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡುವ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಜನರು ದೂರಿದ್ದಾರೆ. ಯಾವುದೇ ಅಧಿಕಾರಿಗಳು ಬಂದರೂ ತನಗೆ ಏನು ಮಾಡಲು ಸಾಧ್ಯವಿಲ್ಲ ಎಂದು ಶಬ್ಬೀರ್ ದರ್ಪದಿಂದ ವರ್ತಿಸುತ್ತಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ಆಹಾರ ಇಲಾಖೆ ಅಧಿಕಾರಿಗಳು ಕೂಡಲೇ ಗಮನಹರಿಸಿ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 06, 2026 09:31 PM
Loading...
Unable to load recommendations.
Follow Us
ಬಸವರಾಜ್​ ಯರಗಣವಿ

ಬಸವರಾಜ್ ಯರಗಣವಿಯವರು ಮೂಲತಃ ಧಾರವಾಡ ಜಿಲ್ಲೆಯವರು. ಇವರು ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ವರದಿಗಾರರಾಗಿ 2008ರ ಏಪ್ರಿಲ್ ನಿಂದ ವೃತ್ತಿ ಆರಂಭಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 3 ವರ್ಷ, ನಂತರ ಹಾವೇರಿ ಜಿಲ್ಲೆಯಲ್ಲಿ 3 ವರ್ಷ ವರದಿಗಾರಿಕೆಯ ಕೆಲಸ ನಿರ್ವಹಿಸಿದ್ದಾರೆ. ಸಧ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಟಿವಿ9 ಕನ್ನಡ ಸುದ್ದಿ ವಾಹಿನಿಯ ಹಿರಿಯ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲೆಯ ರಾಜಕೀಯ, ಅಪರಾಧ, ಮಹತ್ವದ ಬೆಳವಣಿಗೆ ಹಾಗೂ ಮಾನವೀಯ ಸುದ್ದಿಗಳನ್ನು ವರದಿ ಮಾಡಿರುವ ಅನುಭವವಿದೆ.

Read More